ಎಸ್ಸಿ, ಎಸ್ಟಿ ಕಾಲೋನಿಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ: ಕೆ.ಎಂ.ಉದಯ್

| Published : Aug 05 2025, 12:30 AM IST

ಸಾರಾಂಶ

ಸರ್ವ ಸಮುದಾಯಗಳ ಅಭಿವೃದ್ಧಿಗೆ ಪೂರಕವಾಗಿ ಮೂಲ ಸೌಕರ್ಯಗಳನ್ನು ಕಲ್ಪಿಸಲು ಶ್ರಮಿಸುತ್ತಿದ್ದೇನೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಸಮಸಮಾಜದ ಪರಿಕಲ್ಪನೆಯೊಂದಿಗೆ ಹಿಂದುಳಿದ ಹಾಗೂ ಶೋಷಿತ ಸಮುದಾಯಗಳ ಪ್ರಗತಿಗೆ ಆದ್ಯತೆ ನೀಡಲಾಗುವುದು.

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಮದ್ದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯಗಳ ಕಾಲೋನಿಗಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಿ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ಸಮೀಪದ ಚಿಕ್ಕರಸಿನಕೆರೆ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಎಸ್.ಸಿ.ಪಿ, ಟಿ.ಎಸ್.ಪಿ ಯೋಜನೆಯಡಿ ಸುಮಾರು 50 ಲಕ್ಷ ರು. ವೆಚ್ಚದಲ್ಲಿ ಸಿ.ಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಕ್ಷೇತ್ರಕ್ಕೆ ಸರ್ಕಾರದಿಂದ ಸುಮಾರು 1300 ಕೋಟಿಗೂ ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು.

ಸರ್ವ ಸಮುದಾಯಗಳ ಅಭಿವೃದ್ಧಿಗೆ ಪೂರಕವಾಗಿ ಮೂಲ ಸೌಕರ್ಯಗಳನ್ನು ಕಲ್ಪಿಸಲು ಶ್ರಮಿಸುತ್ತಿದ್ದೇನೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಸಮಸಮಾಜದ ಪರಿಕಲ್ಪನೆಯೊಂದಿಗೆ ಹಿಂದುಳಿದ ಹಾಗೂ ಶೋಷಿತ ಸಮುದಾಯಗಳ ಪ್ರಗತಿಗೆ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ರಾಜೀವ್, ಭಾರತಿನಗರ ಬ್ಲಾಕ್ ಎಸ್ಸಿ, ಎಸ್ಟಿ ವಿಭಾಗದ ಅಧ್ಯಕ್ಷ ಅಮೀನ್ ಶಿವಲಿಂಗಯ್ಯ, ಲೋಕೋಪಯೋಗಿ ಇಲಾಖೆ ಎಇಇ ದೇವಾನಂದ್, ಜಾಗೃತಿ ಸಮಿತಿ ಸದಸ್ಯ ಚಿದಂಬರ ಮೂರ್ತಿ, ಗ್ಯಾರಂಟಿ ಸಮಿತಿ ಉಪಾಧ್ಯಕ್ಷ ಸೋಮನಹಳ್ಳಿ ರಾಜೇಂದ್ರ, ಮುಖಂಡರಾದ ಶಿವಲಿಂಗಯ್ಯ, ಜಾಣಪ್ಪ, ಸಿದ್ದರಾಜು, ವೀರಭದ್ರಯ್ಯ, ಸುರೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಜಿಲ್ಲಾ ಕುರುಬರ ಸಂಘಕ್ಕೆ ಸದಸ್ಯತ್ವ ನೋಂದಣಿ ಆರಂಭ

ಮಂಡ್ಯ: ಜಿಲ್ಲಾ ಕುರುಬರ ಸಂಘದ ಸದಸ್ಯತ್ವ ನೋಂದಣಿ ಪ್ರಕ್ರಿಯೆ ಸೋಮವಾರ (ಆ.೪)ದಿಂದ ಆರಂಭಗೊಂಡಿದೆ ಎಂದು ಸಂಘದ ಅಧ್ಯಕ್ಷ ಎಂ.ಎಲ್.ಸುರೇಶ್ ತಿಳಿಸಿದರು. ನಾಲ್ಕು ವರ್ಷಗಳಿಂದ ಸಂಘವು ಸದಸ್ಯತ್ವ ನೋಂದಣಿ ಮಾಡಿರಲಿಲ್ಲ. ಅದಕ್ಕಾಗಿ ಈಗ ನೋಂದಣಿಗೆ ಚಾಲನೆ ನೀಡಿದ್ದೇವೆ. ಜಿಲ್ಲೆಯಲ್ಲಿರುವ ಸಮುದಾಯದವರು ಅರ್ಜಿ ಶುಲ್ಕ ೨೦ ರು. ಹಾಗೂ ಸದಸ್ಯತ್ವ ನೋಂದಣಿಗೆ ೫೦೦ ರು. ಪಾವತಿಸಿ ಸದಸ್ಯತ್ವ ಪಡೆಯಬಹುದು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಆಧಾರ್‌ ಕಾರ್ಡ್, ಮತದಾರರ ಗುರುತಿನ ಚೀಟಿ, ಜಾತಿ ದೃಢೀಕರಣ ಪತ್ರ, ಎರಡು ಭಾವಚಚಿತ್ರಗಳಂದಿಗೆ ನೋಂದಣಿ ಮಾಡಿಸಿಕೊಳ್ಳುವಂತೆ ಮನವಿ ಮಾಡಿದರು. ಗೋಷ್ಠಿಯಲ್ಲಿ ಎಂ.ಜೆ.ಶಶಿಧರ, ಎಸ್.ಎನ್.ರಾಜು, ಎನ್.ಮಹೇಶ ಇದ್ದರು.