ಸಾರಾಂಶ
ಜಿಲ್ಲೆಯಲ್ಲಿ ಮಹಿಳಾ ಉದ್ಯಮಿಗಳಿಗೆ ಹೆಚ್ಚಿನ ಪ್ರೋತ್ಸಾಹ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಮಡಿಕೇರಿ ಶಾಸಕ ಮಂತರ್‌ಗೌಡ ಹೇಳಿದರು.
ಕನ್ನಡಪ್ರಭ ವಾರ್ತೆ ಕುಶಾಲನಗರ
ಜಿಲ್ಲೆಯಲ್ಲಿ ಮಹಿಳಾ ಉದ್ಯಮಿಗಳಿಗೆ ಹೆಚ್ಚಿನ ಪ್ರೋತ್ಸಾಹ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಮಡಿಕೇರಿ ಕ್ಷೇತ್ರ ಶಾಸಕರಾದ ಮಂತರ್ ಗೌಡ ತಿಳಿಸಿದ್ದಾರೆ.ಅವರು ಕುಶಾಲನಗರ ಪಟ್ಟಣದಲ್ಲಿ ನೂತನವಾಗಿ ಆರಂಭಗೊಂಡ ಬನಾನ ಲೀಫ್ ಹೋಟೆಲ್ ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಗ್ರಾಹಕರಿಗೆ ಉತ್ತಮ ಗುಣಮಟ್ಟದ ಆಹಾರ ಒದಗಿಸುವ ಮೂಲಕ ಮಹಿಳಾ ಉದ್ಯಮಿಗಳು ತಮ್ಮ ಸ್ವಾವಲಂಬಿ ಬದುಕು ರೂಪಿಸುವಲ್ಲಿ ವ್ಯಾಪಾರ ವಹಿವಾಟು ಸಹಕಾರಿಯಾಗಲಿದೆ ಎಂದರು.ಕುಶಾಲನಗರ ಸೇರಿದಂತೆ ಜಿಲ್ಲೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯಮಿಗಳಾಗಲು ಚಿಂತನೆ ಹರಿಸಬೇಕು ಎಂದು ಅವರು ಕರೆ ನೀಡಿದರು.
ಎಸ್ ಎಲ್ ಎನ್ ಕಾಫಿ ಸಂಸ್ಥೆಯ ಮಾಲೀಕರಾದ ವಿಶ್ವನಾಥನ್ ಹೋಟೆಲ್ ಮಾಲೀಕರಾದ ಲಿಪಿಕಾ ದೇವಯ್ಯ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.