ಕೇಂದ್ರ ಸರ್ಕಾರದಿಂದ ಮಹಿಳಾ ವರ್ಗಕ್ಕೆ ಹೆಚ್ಚಿನ ಬಲ: ಬಿ.ವೈ.ರಾಘವೇಂದ್ರ

| Published : Mar 31 2024, 02:11 AM IST

ಕೇಂದ್ರ ಸರ್ಕಾರದಿಂದ ಮಹಿಳಾ ವರ್ಗಕ್ಕೆ ಹೆಚ್ಚಿನ ಬಲ: ಬಿ.ವೈ.ರಾಘವೇಂದ್ರ
Share this Article
  • FB
  • TW
  • Linkdin
  • Email

ಸಾರಾಂಶ

ಹೆಣ್ಣು ಮಕ್ಕಳ ಭವಿಷ್ಯದ ಗ್ಯಾರೆಂಟಿ ಯೋಜನೆಗಳಾಗಿ ಬೇಟಿ ಪಡಾವೋ, ಉಜ್ವಲ ಮಾತೃವಂದನಾ ಯೋಜನೆ, ಸುಕನ್ಯಾ ಸಮೃದ್ದಿ ಸೇರಿ ಹತ್ತಾರು ಯೋಜನೆಗಳು ಮಹಿಳಾ ವರ್ಗಕ್ಕೆ ಹೆಚ್ಚಿನ ಬಲ ತುಂಬಿದೆ ಎಂದರು.ರಾಜ್ಯದಲ್ಲಿ ಬಿ.ಎಸ್ .ಯಡಿಯೂರಪ್ಪ ಸರ್ಕಾರ ಅವಧಿಯಲ್ಲಿ ಹೆಣ್ಣು ಮಕ್ಕಳಿಗೆ ಉಚಿತ ಸೈಕಲ್ ನೀಡಿದ್ದು ಮಾತ್ರವಲ್ಲದೇ ಹೆಣ್ಣು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಜಾರಿಗೆ ತಂದಿದ್ದ ಭಾಗ್ಯಲಕ್ಷ್ಮಿ ಯೋಜನೆ ಹೆಣ್ಣು ಮಕ್ಕಳ ಭವಿಷ್ಯ ರೂಪಿಸುವಲ್ಲಿಯೂ ಸಹಕಾರಿಯಾಗಿದೆ.

ಕನ್ನಡಪ್ರಭ ವಾರ್ತೆ ತೀರ್ಥಹಳ್ಳಿಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕಳೆದ ಹತ್ತು ವರ್ಷದ ಅವಧಿಯಲ್ಲಿ ಹೆಣ್ಣು ಮಕ್ಕಳ ಆರ್ಥಿಕ ಸ್ವಾವಲಂಬನೆಗೆ ಜನಧನ್, ಬೇಟಿ ಬಚಾವೋ ಮುಂತಾದ ಯೋಜನೆಗಳಿಂದ ದೇಶದ ಇತಿಹಾಸದಲ್ಲಿ ದಾಖಲೆ ನಿರ್ಮಿಸಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು.

ತಾಲೂಕಿನ ದರಲಗೋಡು ಗ್ರಾಮದ ಮನೆಯೊಂದರ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಆರಗ ಶಕ್ತಿ ಕೇಂದ್ರದ ಮಹಿಳಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿ, ಹೆಣ್ಣು ಮಕ್ಕಳ ಭವಿಷ್ಯದ ಗ್ಯಾರೆಂಟಿ ಯೋಜನೆಗಳಾಗಿ ಬೇಟಿ ಪಡಾವೋ, ಉಜ್ವಲ ಮಾತೃವಂದನಾ ಯೋಜನೆ, ಸುಕನ್ಯಾ ಸಮೃದ್ದಿ ಸೇರಿ ಹತ್ತಾರು ಯೋಜನೆಗಳು ಮಹಿಳಾ ವರ್ಗಕ್ಕೆ ಹೆಚ್ಚಿನ ಬಲ ತುಂಬಿದೆ ಎಂದರು.ರಾಜ್ಯದಲ್ಲಿ ಬಿ.ಎಸ್ .ಯಡಿಯೂರಪ್ಪ ಸರ್ಕಾರ ಅವಧಿಯಲ್ಲಿ ಹೆಣ್ಣು ಮಕ್ಕಳಿಗೆ ಉಚಿತ ಸೈಕಲ್ ನೀಡಿದ್ದು ಮಾತ್ರವಲ್ಲದೇ ಹೆಣ್ಣು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಜಾರಿಗೆ ತಂದಿದ್ದ ಭಾಗ್ಯಲಕ್ಷ್ಮಿ ಯೋಜನೆ ಹೆಣ್ಣು ಮಕ್ಕಳ ಭವಿಷ್ಯ ರೂಪಿಸುವಲ್ಲಿಯೂ ಸಹಕಾರಿಯಾಗಿದೆ ಎಂದು ಹೇಳಿದರು.

ಪ್ರಸ್ತುತ ಭಾರತ ಆರ್ಥಿಕವಾಗಿಯೂ ಬಲಿಷ್ಠವಾಗಿದ್ದು ನರೇಂದ್ರ ಮೋದಿ ನೇತೃತ್ವದಲ್ಲಿ ವಿಶ್ವಗುರುವಾಗುವ ನಿಟ್ಟಿನಲ್ಲಿ ದಾಪುಗಾಲಿಟ್ಟಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ಕೈ ಬಲ ಪಡಿಸುವುದರ ಜೊತೆಗೆ ವಿಕಸಿತ ಭಾರತ ನಿರ್ಮಾಣಕ್ಕಾಗಿ ಬಿಜೆಪಿಯನ್ನು ಬೆಂಬಲಿಸಬೇಕು ಎಂದೂ ಮನವಿ ಮಾಡಿದರು.ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ಮಹಿಳೆಯರ ಬಗ್ಗೆ ವಿಶೇಷ ಆದ್ಯತೆ ನೀಡುತ್ತಿರುವ ಕೇಂದ್ರ ಸರ್ಕಾರ ಸುಧಾಮೂರ್ತಿಯವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿದೆ. ಸಾಲುಮರದ ತಿಮ್ಮಕ್ಕ, ಸೂಲಗಿತ್ತಿ ನರಸಮ್ಮ ಮಂಜಮ್ಮ ಮುಂತಾದ ಸಾಧಕ ಮಹಿಳೆಯರಿಗೆ ಪದ್ಮ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಕಳೆದ ಚುನಾವಣೆಯಲ್ಲಿ ಗ್ಯಾರೆಂಟಿ ಯೋಜನೆಗಳಿಂದ ವಂಚಿತರಾಗಿದ್ದ ಕೂಲಿ ಕಾರ್ಮಿಕ ಮಹಿಳೆಯರು ಕೂಡಾ ಈ ಬಾರಿ ರಾಷ್ಟ್ರೀಯ ಹಿತದೃಷ್ಟಿಯಿಂದ ಬಿಜೆಪಿಗೆ ಮತ ಹಾಕುವುದಾಗಿ ಹೇಳುವುದನ್ನು ಕಾಣುತ್ತಿದ್ದೇವೆ ಎಂದರು.

ವೇದಿಕೆಯಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಕುಣಜೆ ಕಿರಣ್ ಪ್ರಭಾಕರ್, ದರಲಗೋಡು ಕೃಷ್ಣಾ ಜೋಯ್ಸ್ , ರಾಜ್ಯ ಮಹಿಲಾ ಮೋರ್ಚಾ ಅಧ್ಯಕ್ಷೆ ಮಂಜುಳಾ, ಗಾಯತ್ರಿ, ಮಂಗಳಾ ನಾಗೇಂದ್ರ, ಯಶೋದಾ ಮಂಜುನಾಥ್, ಶೈಲಾ ನಾಗರಾಜ್, ಚಂದ್ರಕಲಾ ಇದ್ದರು.ಮಹಿಳಾ ಸಬಲೀಕರಣಕ್ಕೆ ಪ್ರಾಶಸ್ತ್ಯಮಹಾತ್ಮಗಾಂಧಿ ಗ್ರಾಮಗಳ ವಿಕಾಸ ಮತ್ತು ದೇಶದ ಅಭಿವೃದ್ಧಿಗೆ ಮಹಿಳಾ ಶಕ್ತಿಗೆ ಹೆಚ್ಚಿನ ಬಲ ನೀಡಬೇಕು ಎಂಬ ಕನಸು ಕಂಡಿದ್ದರು. ಆದರೆ ದೇಶಕ್ಕೆ ಸ್ವಾತಂತ್ರ್ಯ ಬಂದು ಏಳು ದಶಕಗಳೇ ಸಂದಿದ್ದರೂ ಮಹಿಳಾ ಸಬಲೀಕರಣಕ್ಕೆ ಬಿಜೆಪಿ ಸರ್ಕಾರ ನೀಡಿದಷ್ಟು ಪ್ರಾಶಸ್ತ್ಯ ಯಾವುದೇ ಸರ್ಕಾರ ನೀಡಿರಲಿಲ್ಲ. ನರೇಂದ್ರ ಮೋದಿ ಸರ್ಕಾರ ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಗಾಂಧೀಜಿಯವರ ಕನಸು ನನಸು ಮಾಡಿದೆ.

ಬಿ.ವೈ.ರಾಘವೇಂದ್ರ, ಸಂಸದ