ಸಾರಾಂಶ
ಪರಿಶಿಷ್ಟ ಜಾತಿ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಒಳಮೀಸಲಾತಿ ಜಿಲ್ಲಾ ಹೋರಾಟ ಸಮಿತಿ ನೇತೃತ್ವದಲ್ಲಿ ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಯುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು 3000ಕ್ಕೂ ಅಧಿಕ ಜನರು ಪಾಲ್ಗೊಳ್ಳಲಿದ್ದಾರೆ ಎಂದು ಒಳಮೀಸಲಾತಿ ಜಿಲ್ಲಾ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ರಾಜು ಜಾಂಗಟಿ ತಿಳಿಸಿದರು.
ಕನ್ನಡಪ್ರಭ ವಾರ್ತೆ ಚನ್ನಮ್ಮನ ಕಿತ್ತೂರು
ಪರಿಶಿಷ್ಟ ಜಾತಿ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಒಳಮೀಸಲಾತಿ ಜಿಲ್ಲಾ ಹೋರಾಟ ಸಮಿತಿ ನೇತೃತ್ವದಲ್ಲಿ ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಯುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಅ.16ರಂದು ಬೆಳಗ್ಗೆ 10 ಗಂಟೆಗೆ ಕಿತ್ತೂರಿನಿಂದ 3000ಕ್ಕೂ ಅಧಿಕ ಜನರು ಪಾಲ್ಗೊಳ್ಳಲಿದ್ದಾರೆ ಎಂದು ಒಳಮೀಸಲಾತಿ ಜಿಲ್ಲಾ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ರಾಜು ಜಾಂಗಟಿ ತಿಳಿಸಿದರು.ಡೊಂಬರಕೊಪ್ಪ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕರ್ನಾಟಕ ಮಾದಿಗರ ಸಂಘದ ಜಿಲ್ಲಾಧ್ಯಕ್ಷ ಮಡಿವಾಳಪ್ಪ ವಕ್ಕುಂದ ಮಾತನಾಡಿ, ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಹಲವಾರು ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಈಗ ಸರ್ವೋಚ್ಚ ನ್ಯಾಯಾಲಯ ಒಳಮೀಸಲಾತಿ ಜಾರಿಗೊಳಿಸಲು ರಾಜ್ಯಗಳಿಗೆ ಅಧಿಕಾರಿ ನೀಡಿದ್ದರಿಂದ ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸುರೇಶ ಜಾಂಗಟಿ, ಮಂಜುನಾಥ ಅಡಿಬಟ್ಟಿ, ರಾಜು ಮಣ್ಣಪ್ಪನವರ, ನಾಗೇಶ ಪರಸನಟ್ಟಿ, ಗುರಶಿದ್ದ ಜಾಂಗಟಿ, ಬಾಬು ಹುಲಮನಿ, ಗಂಗಾಧರ ಮುಳಕೂರ, ಶಿವಾನಂದ ಚನ್ನನ್ನವರ, ಬಸವರಾಜ ಕೆಳಗಡೆ ಇತರರು ಇದ್ದರು.