ಸಾರಾಂಶ
ಚಿತ್ರದುರ್ಗ: ಚಳ್ಳಕೆರೆ ವಿಧಾನಸಭೆ ಕ್ಷೇತ್ರದಲ್ಲಿ ಶಾಲಾ ಕಾಲೇಜುಗಳ ಅಭಿವೃದ್ಧಿಗೆ ಸುಮಾರು 35 ಕೋಟಿಗೂ ಹೆಚ್ಚಿನ ಅನುದಾನ ವ್ಯಯ ಮಾಡಿ 150ಕ್ಕೂ ಹೆಚ್ಚು ನೂತನ ಕೊಠಡಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.
ಚಿತ್ರದುರ್ಗ: ಚಳ್ಳಕೆರೆ ವಿಧಾನಸಭೆ ಕ್ಷೇತ್ರದಲ್ಲಿ ಶಾಲಾ ಕಾಲೇಜುಗಳ ಅಭಿವೃದ್ಧಿಗೆ ಸುಮಾರು 35 ಕೋಟಿಗೂ ಹೆಚ್ಚಿನ ಅನುದಾನ ವ್ಯಯ ಮಾಡಿ 150ಕ್ಕೂ ಹೆಚ್ಚು ನೂತನ ಕೊಠಡಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.
ಚಿತ್ರದುರ್ಗ ತಾಲೂಕಿನ ಮುದ್ದಾಪುರ ಗ್ರಾಮದಲ್ಲಿ ಆರ್‌ಐಡಿಎಫ್ ನಬಾರ್ಡ್ ಯೋಜನೆಯಡಿ ನೂತನವಾಗಿ ನಿರ್ಮಾಣವಾಗಿದ್ದ 6 ಶಾಲಾ ಕೊಠಡಿಗಳ ಉದ್ಘಾಟನೆ ಮತ್ತು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.ಗ್ರಾಮೀಣ ಭಾಗದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಕಟ್ಟಡಗಳ ನಿರ್ಮಾಣಕ್ಕೆ ಶಾಸಕರ ಅನುದಾನ, ಡಿಎಂಎಫ್, ನಬಾರ್ಡ್, ಸಿಎಂ ವಿಶೇಷ ಅನುದಾನ ಕ್ರೋಢೀಕರಿಸಿ ಶಾಲಾ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದರು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಅವಶ್ಯಕತೆ ಇದ್ದು, ಶಿಕ್ಷಣದಿಂದ ಯಾರೂ ವಂಚಿತರಾಗಬಾರದು. ಶಿಕ್ಷಣಕ್ಕಾಗಿ ಸರ್ಕಾರ ಹಲವಾರು ಯೋಜನೆಗಳ ಜಾರಿಗೊಳಿಸಿದೆ. ಉಚಿತ ಸಮವಸ್ತ್ರ, ಕ್ಷೀರಭಾಗ್ಯ, ಮೊಟ್ಟೆ ಸೇರಿ ಹಲವು ಸೌಲಭ್ಯ ಒದಗಿಸಲಾಗಿದೆ. ಪೋಷಕರು ಕಡ್ಡಾಯವಾಗಿ ಮಕ್ಕಳನ್ನು ಶಾಲೆಗೆ ಕಳುಹಿಸುವ ಮೂಲಕ ಶೈಕ್ಷಣಿಕ ಉನ್ನತಿಗೆ ಶ್ರಮಿಸಬೇಕೆಂದು ಎಂದು ಮನವಿ ಮಾಡಿದರು.
ಚಳ್ಳಕೆರೆ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಬಾಬುರೆಡ್ಡಿ, ಕ್ಷೇತ್ರ ಶಿಕ್ಷಣಧಿಕಾರಿ ಎಸ್.ನಾಗಭೂಷಣ್, ಮುದ್ದಾಪುರ ಗ್ರಾಪಂ ಅಧ್ಯಕ್ಷೆ ಮಂಗಳ ಸಿದ್ದೇಶ್, ಉಪಾಧ್ಯಕ್ಷ ಸುಧಾರಾಣಿ ನಾಗರಾಜ್, ಸದಸ್ಯರಾದ ಓಬಳೇಶ್ ಶಾಂತಮ್ಮ, ನಾಗರಾಜ್ ಸುದಮ್ಮ, ಮುಖಂಡರುಗಳಾದ ತಿಮ್ಮರಾಜು, ಮಹೇಶ್, ನಾಗರಾಜ್ ಇದ್ದರು.