ಸಾರಾಂಶ
ಮತದಾರರು ನೀಡಿದ ತೀರ್ಪಿಗೆ ತಲೆಬಾಗಿ ಕೃತಜ್ಞತೆ ಸಲ್ಲಿಸುತ್ತೇನೆ. ಜಿಲ್ಲೆಯ ಜನತೆ ನನ್ನ ಮೇಲಿಟ್ಟಿರುವ ಪ್ರೀತಿ, ವಿಶ್ವಾಸ ಹೀಗೆಯೇ ಮುಂದುವರಿಯಲಿ. ಚುನಾವಣೆಯಲ್ಲಿ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಪಕ್ಷದ ಮುಖಂಡರು, ಕಾರ್ಯರ್ಕತರೆಲ್ಲರಿಗೂ ನನ್ನ ಹೃದಯ ಪೂರ್ವಕ ಅಭಿನಂದನೆಗಳು.
ಕನ್ನಡಪ್ರಭ ವಾರ್ತೆ ಮಂಡ್ಯ
5 ಲಕ್ಷಕ್ಕೂ ಅಧಿಕ ಮತದಾರರು ನನ್ನ ಪರವಾಗಿ ಮತ ಚಲಾಯಿಸಿರುವುದು ಮಂಡ್ಯ ಲೋಕಸಭಾ ಕ್ಷೇತ್ರದ ಜನತೆ ನನ್ನ ಮೇಲಿಟ್ಟಿರುವ ಪ್ರೀತಿ, ವಿಶ್ವಾಸಕ್ಕೆ ಸಾಕ್ಷಿಯಾಗಿದೆ. ಕಡಿಮೆ ಅವಧಿಯಲ್ಲಿ ಲಕ್ಷಾಂತರ ಜನರ ವಿಶ್ವಾಸ ಗಳಿಸಿರುವುದು ನನಗೆ ಹೆಮ್ಮೆ ಎನಿಸಿದೆ ಎಂದು ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು (ವೆಂಕಟರಮಣೇಗೌಡ) ಧನ್ಯವಾದ ಸಲ್ಲಿಸಿದ್ದಾರೆ.ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಮತದಾರರು ನೀಡಿದ ತೀರ್ಪಿಗೆ ತಲೆಬಾಗಿ ಕೃತಜ್ಞತೆ ಸಲ್ಲಿಸುತ್ತೇನೆ. ಜಿಲ್ಲೆಯ ಜನತೆ ನನ್ನ ಮೇಲಿಟ್ಟಿರುವ ಪ್ರೀತಿ, ವಿಶ್ವಾಸ ಹೀಗೆಯೇ ಮುಂದುವರಿಯಲಿ. ಚುನಾವಣೆಯಲ್ಲಿ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಪಕ್ಷದ ಮುಖಂಡರು, ಕಾರ್ಯರ್ಕತರೆಲ್ಲರಿಗೂ ನನ್ನ ಹೃದಯ ಪೂರ್ವಕ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿದ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಕ್ಷೇತ್ರದ ಶಾಸಕರು, ಕಾರ್ಯಕರ್ತರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.ತಾಲೂಕುವಾರು ಎಚ್ಡಿಕೆ ಪಡೆದ ಗೆಲುವಿನ ಅಂತರ
ಮಂಡ್ಯ ಲೋಕಸಭಾ ಕ್ಷೇತ್ರಗಳು ಎಚ್ ಡಿಕೆ ಸ್ಟಾರ್ ಚಂದ್ರು ತಾಲೂಕುವಾರು ಅಂತರಮಳವಳ್ಳಿ 99567 90212 9355ಮದ್ದೂರು 115671 58893 56778
ಮೇಲುಕೋಟೆ 110896 61014 49882ಮಂಡ್ಯ 105253 67033 38220ಶ್ರೀರಂಗಪಟ್ಟಣ 113843 65254 48589ನಾಗಮಂಗಲ 113087 66576 46511
ಕೆ.ಆರ್ .ಪೇಟೆ 100170 73648 26522ಕೆ.ಆರ್ .ನಗರ 88995 82148 6847ಅಂಚೆ ಮತ 4399 2483 1916ಒಟ್ಟು ಮತ 851881 567261 2,84,620
ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳು ಪಡೆದ ಮತಗಳುಎಚ್ .ಡಿ.ಕುಮಾರಸ್ವಾಮಿ 851881ವೆಂಕಟರಮಣೇಗೌಡ(ಸ್ಟಾರ್ ಚಂದ್ರು) 567261
ಶಿವಕುಮಾರ ಎಸ್ 6964ಚಂದ್ರಶೇಖರ ಕೆ.ಆರ್. 1476ಬೂದಯ್ಯ ಬಿ.ಪಿ. 1370ಎಚ್.ಡಿ.ರೇವಣ್ಣ 590
ಲೋಕೇಶ್ ಎಸ್ 1163ಎಸ್.ಅರವಿಂದ್ 442ಚನ್ನಮಾಯಿಗೌಡ 497ಚಂದನ್ ಗೌಡ ಕೆ. 12394
ಎನ್ .ಬಸವರಾಜು 843ಬೀರೇಶ್ ಸಿ.ಟಿ. 931ರಾಮಯ್ಯ ಡಿ. 3810ರಂಜಿತಾ ಎನ್. 2909
ನೋಟಾ 7736ಒಟ್ಟು ಚಲಾವಣೆಯಾದ ಮತಗಳು 1460267