ಸಾರಾಂಶ
ಹರಿಹರ ತಾಲೂಕಿನಾದ್ಯಂತ ಸುಮಾರು ೫೦ ಸಾವಿರಕ್ಕೂ ಹೆಚ್ಚು ಸದಸ್ಯತ್ವ ಮಾಡಿಸುವ ಗುರಿ ಹೊಂದಲಾಗಿದೆ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದ್ದಾರೆ.
ಹರಿಹರ: ತಾಲೂಕಿನಾದ್ಯಂತ ಸುಮಾರು ೫೦ ಸಾವಿರಕ್ಕೂ ಹೆಚ್ಚು ಸದಸ್ಯತ್ವ ಮಾಡಿಸುವ ಗುರಿ ಹೊಂದಲಾಗಿದೆ ಎಂದು ಶಾಸಕ ಬಿ.ಪಿ. ಹರೀಶ್ ನುಡಿದರು. ನಗರದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಸದಸ್ಯತ್ವ ಅಭಿಯಾನ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಬಿಜೆಪಿ ವಿಶ್ವದಲ್ಲೇ ಅತ್ಯಂತ ದೊಡ್ಡ ರಾಜಕೀಯ ಪಕ್ಷವಾಗಿ ಗುರುತಿಸಿಕೊಂಡಿದೆ. ಅತಿ ವೇಗವಾಗಿ ದೇಶದಲ್ಲಿ ಬೆಳೆಯುತ್ತಿದೆ. ಪ್ರತಿಯೊಬ್ಬರು ಸಮರ್ಪಣಾ ಭಾವದಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕಿದೆ ಎಂದರು.
ಸೆ.೨ರಂದು ದೇಶಾದ್ಯಂತ ನಡೆಯುವ ಸದಸ್ಯತ್ವ ನೋಂದಣಿ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಚಾಲನೆ ನೀಡಲಿದ್ದಾರೆ. ಸೆ.೧೭ ವರೆಗೆ ಸದಸ್ಯತ್ವ ಅಭಿಯಾನ ನಡೆಯಲಿದೆ. ಸೆ.೨ರಂದು ಬೆಳಗ್ಗೆ ೯ ಗಂಟೆಗೆ ಹರಿಹರ ನಗರದ ಬಿಜೆಪಿ ಕಚೇರಿಯಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತದೆ. ಪ್ರತಿಯೊಂದು ಬೂತ್‌ಮಟ್ಟದ ಅಧ್ಯಕ್ಷರು ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ತಿಳಿಸಿದರು.ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಮುಖ ಕೋಟ್ರೇಶ್ ಮಾತನಾಡಿ ಮೊ.೮೮೦೦೦- ೦೨೦೨೪ ಇಲ್ಲಿಗೆ ಮಿಸ್ಡ್ ಕಾಲ್ ಮಾಡುವ ಮೂಲಕ ಬಿಜೆಪಿ ಸದಸ್ಯತ್ವ ಪಡೆಯಬಹುದು. ಪಕ್ಷದ ಎಲ್ಲ ಮೋರ್ಚಾಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಅಭಿಯಾನದಲ್ಲಿ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಐರಣಿ ಅಣ್ಣಪ್ಪ, ಧನಂಜಯ ಕಡ್ಲೇಬಾಳ್, ಮಾಜಿ ಜಿಲ್ಲಾಧ್ಯಕ್ಷ ಎಸ್.ಎಂ. ವೀರೇಶ್ ಹನಗವಾಡಿ, ಹರಿಹರ ಗ್ರಾಮಾಂತರ ಅಧ್ಯಕ್ಷ ಲಿಂಗರಾಜ್ ಹಿಂಡಸಘಟ್ಟ, ನಗರ ಪ್ರಧಾನ ಕಾರ್ಯದರ್ಶಿ ತುಳಜಪ್ಪ ಭೂತೆ ಇತರರು ಉಪಸ್ಥಿತರಿದ್ದರು.- - - -೩೦ಎಚ್‌ಆರ್‌ಆರ್ ೫: