ಫ್ರೀಡಂ ಪಾರ್ಕ್ ಧರಣಿಗೆ ಜಿಲ್ಲೆಯ 500ಕ್ಕೂ ಹೆಚ್ಚು ಕಾರ್ಯಕರ್ತರು: ಎನ್.ಎಸ್. ಹೆಗಡೆ ಕರ್ಕಿ

| Published : Apr 02 2025, 01:01 AM IST

ಫ್ರೀಡಂ ಪಾರ್ಕ್ ಧರಣಿಗೆ ಜಿಲ್ಲೆಯ 500ಕ್ಕೂ ಹೆಚ್ಚು ಕಾರ್ಯಕರ್ತರು: ಎನ್.ಎಸ್. ಹೆಗಡೆ ಕರ್ಕಿ
Share this Article
  • FB
  • TW
  • Linkdin
  • Email

ಸಾರಾಂಶ

ಬೆಲೆ ಏರಿಕೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಏ. 2ರಿಂದ ಬಿಜೆಪಿ ಅಹೋರಾತ್ರಿ ಧರಣಿ ಕೈಗೊಳ್ಳಲಿದ್ದು, ಉತ್ತರ ಕನ್ನಡ ಜಿಲ್ಲೆಯಿಂದ 500-600 ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಕರ್ಕಿ ಹೇಳಿದರು.

ಶಿರಸಿ: ಬೆಲೆ ಏರಿಕೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಏ. 2ರಿಂದ ಬಿಜೆಪಿ ಅಹೋರಾತ್ರಿ ಧರಣಿ ಕೈಗೊಳ್ಳಲಿದ್ದು, ಉತ್ತರ ಕನ್ನಡ ಜಿಲ್ಲೆಯಿಂದ 500-600 ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಕರ್ಕಿ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ, ವಾಲ್ಮೀಕಿ ಹಗರಣ, ಎಸ್ಸಿ-ಎಸ್ಟಿ ಸಮುದಾಯಕ್ಕೆ ಮೀಸಲಾಗಿಟ್ಟ ಹಣವನ್ನು ಬೇರೆ ಯೋಜನೆಗಳಿಗೆ ಬಳಸಿಕೊಂಡಿದ್ದು, ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಏ. ೭ರಿಂದ ಮೈಸೂರಿನಿಂದ ಜನಾಕ್ರೋಶ ಜಾತ್ರೆ ಪ್ರಾರಂಭಗೊಳ್ಳಲಿದ್ದು, ಏ. ೧೩ರಂದು ಜಿಲ್ಲೆಯಲ್ಲಿ ಜನಾಕ್ರೋಶ ಯಾತ್ರೆ ನಡೆಸಲಿದ್ದೇವೆ ಎಂದರು.

ಶಾಸಕ ಶಿವರಾಮ ಹೆಬ್ಬಾರ್ ಅವರಿಂದ ಪಕ್ಷಕ್ಕೆ ಮುಜುಗರ ಆಗುತ್ತಿದೆ ಎಂದು ೩ ಬಾರಿ ರಾಜ್ಯ ಹಾಗೂ ಕೇಂದ್ರದ ನಾಯಕರಿಗೆ ಪತ್ರ ಬರೆದು ಶಿಫಾರಸು ಮಾಡಿದ್ದೇನೆ. ಅವರಿಗೆ ಕೇಂದ್ರದ ವರಿಷ್ಠರು ನೋಟಿಸ್ ನೀಡಿದ್ದಾರೆ. ಕ್ರಮ ತೆಗೆದುಕೊಳ್ಳುವುದು, ಬಿಡುವುದು ಕೇಂದ್ರಕ್ಕೆ ಬಿಟ್ಟ ವಿಚಾರ ಎಂದು ಎನ್.ಎಸ್. ಹೆಗಡೆ ಕರ್ಕಿ ಹೇಳಿದರು.

ನಗರ ಮಂಡಳ ಅಧ್ಯಕ್ಷ ಆನಂದ ಸಾಲೇರ ಮಾತನಾಡಿ, ಪೈಪ್ ಕಳ್ಳತನ ಪ್ರಕರಣಕ್ಕೆ ಸಂಬಧಿಸಿದಂತೆ ಪೊಲೀಸ್ ಪ್ರಕರಣ ದಾಖಲಾಗಿದೆ. ೮ ದಿನಗಳ ಒಳಗೆ ಕಳ್ಳರನ್ನು ಬಂಧಿಸದಿದ್ದರೆ ಬಿಜೆಪಿ ಸದಸ್ಯರೆಲ್ಲರೂ ಸೇರಿ ಹೋರಾಟ ರೂಪಿಸುತ್ತೇವೆ. ಬಿಜೆಪಿ ಸದಸ್ಯರು ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡುಬಂದರೆ ಅವರ ಮೇಲೂ ಶಿಸ್ತುಕ್ರಮ ಜರುಗಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ವಿವೇಕಾನಂದ ವೈದ್ಯ, ಜಿಲ್ಲಾ ವಕ್ತಾರ ಸದಾನಂದ ಭಟ್ಟ ನಿಡಗೋಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ, ನಗರಸಭಾ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ, ಉಪಾಧ್ಯಕ್ಷ ರಮಾಕಾಂತ ಭಟ್, ರವಿಚಂದ್ರ ಶೆಟ್ಟಿ, ಶ್ರೀರಾಮ ನಾಯ್ಕ ಇದ್ದರು.