75 ಸಾವಿರಕ್ಕೂ ಅಧಿಕ ಸದಸ್ಯತ್ವ ಗುರಿ

| Published : Sep 10 2024, 01:33 AM IST

ಸಾರಾಂಶ

ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ರಾಯಬಾಗ ವಿಧಾನಸಭೆ ಕ್ಷೇತ್ರದಲ್ಲಿ ಸುಮಾರು 75 ಸಾವಿರಕ್ಕಿಂತ ಹೆಚ್ಚಿಗೆ ಸದಸ್ಯತ್ವ ಮಾಡುವ ಗುರಿಯನ್ನು ಹೊಂದಿದ್ದೇವೆ ಎಂದು ರಾಯಬಾಗ ವಿಧಾನಸಭೆ ಕ್ಷೇತ್ರದ ಶಾಸಕ ಡಿ.ಎಂ.ಐಹೊಳೆ ಹೇಳಿದರು.

ಕನ್ನಡಪ್ರಭ ವಾರ್ತೆ ಚಿಕ್ಕೋಡಿ

ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ರಾಯಬಾಗ ವಿಧಾನಸಭೆ ಕ್ಷೇತ್ರದಲ್ಲಿ ಸುಮಾರು 75 ಸಾವಿರಕ್ಕಿಂತ ಹೆಚ್ಚಿಗೆ ಸದಸ್ಯತ್ವ ಮಾಡುವ ಗುರಿಯನ್ನು ಹೊಂದಿದ್ದೇವೆ ಎಂದು ರಾಯಬಾಗ ವಿಧಾನಸಭೆ ಕ್ಷೇತ್ರದ ಶಾಸಕ ಡಿ.ಎಂ.ಐಹೊಳೆ ಹೇಳಿದರು.

ತಾಲೂಕಿನ ಕರಗಾಂವ ಗ್ರಾಮದ ಬೀರೇಶ್ವರ ದೇವಸ್ಥಾನದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದ ಅವರು, ಕರಗಾಂವ ಗ್ರಾಮದಲ್ಲಿ ಕಳೆದ ಚುನಾವಣೆಯಲ್ಲಿ ಬಿಜೆಪಿಗೆ ಮತಚಲಾಯಿಸಿದ ಜನರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವವನ್ನು ಮಾಡುವ ಉದ್ದೇಶವಿದ್ದು, ಹಿಂದುಳಿದ ವರ್ಗಗಳಿಗೆ ವಿಶೇಷವಾದ ಯೋಜನೆಗಳನ್ನು ರೂಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದೆ ಎಂದರು.ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಪವನ ಕತ್ತಿ ಮಾತನಾಡಿ, ಪ್ರತಿ ಬೂತ್‌ಮಟ್ಟದಲ್ಲಿ ಸುಮಾರು 300 ಸದಸ್ಯತ್ವ ಮಾಡುವ ಗುರಿ ಹೊಂದಿದ್ದೇವೆ ಎಂದರು.ಬಿಜೆಪಿ ಮಂಡಲ ಅಧ್ಯಕ್ಷ ಪ್ರಥ್ವಿರಾಜ್ ಜಾಧವ, ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆ ನಿರ್ದೇಶಕ ಸುರೇಶ ಬೆಲ್ಲದ, ಮಹಾಲಿಂಗ ಹಂಜಿ, ಮಹಾದೇವ ಜಿವನಿ, ಬಸಲಿಂಗ ಕಾಡೇಶಗೋಳ,ಮನೋಜ ಮನಗುಳಿ,ವಿಜಯ ಆಕಳೆ,ರಮೇಶ ಕಾಳನ್ನವರ ಉಪಸ್ಥಿತರಿದ್ದರು.