ಆರತಕ್ಷತೆಯಲ್ಲಿ ಊಟ ಸೇವಿಸಿ 90ಕ್ಕೂ ಹೆಚ್ಚು ಜನ ಅಸ್ವಸ್ಥ

| Published : Apr 29 2024, 01:30 AM IST

ಆರತಕ್ಷತೆಯಲ್ಲಿ ಊಟ ಸೇವಿಸಿ 90ಕ್ಕೂ ಹೆಚ್ಚು ಜನ ಅಸ್ವಸ್ಥ
Share this Article
  • FB
  • TW
  • Linkdin
  • Email

ಸಾರಾಂಶ

ತಕ್ಷಣವೇ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಘಟನೆಯಲ್ಲಿ ಯಾರಿಗೂ ತೊಂದರೆಯಾಗಿಲ್ಲ. ಎಲ್ಲರೂ ಗುಣಮುಖರಾಗಿದ್ದಾರೆ.

ಹರಪನಹಳ್ಳಿ: ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಊಟ ಸೇವಿಸಿ 90ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ತಾಲೂಕಿನ ಶಿಂಗ್ರಿಹಳ್ಳಿ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. ಅಸ್ವಸ್ಥಗೊಂಡಿರುವ ಎಲ್ಲರೂ ದಾವಣಗೆರೆ ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಏ.26ರಂದು ತಾಲೂಕಿನ ಗರ್ಭಗುಡಿ ಗ್ರಾಮದಲ್ಲಿ ಗಂಡಿನ ಮನೆಯ ಮುಂದೆ ಮದುವೆ ಸಮಾರಂಭ ನಡೆದಿತ್ತು. ಏ.27ರಂದು ಶಿಂಗ್ರಿಹಳ್ಳಿ ಗ್ರಾಮದ ಕಬ್ಬೇರ ರಾಮಚಂದ್ರಪ್ಪ ಎಂಬವರ ಮನೆಯಲ್ಲಿ ನಡೆದ ಮಗಳ ಆರತಕ್ಷತೆ ಕಾರ್ಯಕ್ರಮದಲ್ಲಿ ಊಟ ಸೇವಿಸಿದ 96 ಜನರು ಅಸ್ವಸ್ಥಗೊಂಡಿದ್ದಾರೆ.

ತಕ್ಷಣವೇ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಘಟನೆಯಲ್ಲಿ ಯಾರಿಗೂ ತೊಂದರೆಯಾಗಿಲ್ಲ. ಎಲ್ಲರೂ ಗುಣಮುಖರಾಗಿದ್ದಾರೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಹಾಲಸ್ವಾಮಿ ತಿಳಿಸಿದರು.

ವರದಿ ಬಳಿಕ ಕ್ರಮ:

ಆರಕ್ಷತೆ ಕಾರ್ಯಕ್ರಮದಲ್ಲಿ ತಯಾರಿಸಲಾಗಿದ್ದ ಪಾಯಸ, ಅನ್ನ ಸಂಬಾರ್, ಕೋಸಂಬರಿ, ಪಲ್ಯವನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ವರದಿ ಬಂದ ಮೇಲೆ ಮುಂದಿನ ಕ್ರಮ ವಹಿಸಲಾಗುವುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಹಾಲಸ್ವಾಮಿ ತಿಳಿಸಿದರು.

ಚಿಗಟೇರಿ ಜಿಲ್ಲಾಸ್ಪತ್ರೆಗೆ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ್, ಜಿಲ್ಲಾ ಆರೋಗ್ಯಾಧಿಕಾರಿ ಶಂಕರನಾಯ್ಕ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಷಣ್ಮುಖಪ್ಪ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.