೮ ತಿಂಗಳಲ್ಲಿ ನೂರು ಕೋಟಿಗೂ ಹೆಚ್ಚಿನ ಅನುದಾನ: ಶಾಸಕ ಶ್ರೀನಿವಾಸ ಮಾನೆ

| Published : Feb 10 2024, 01:47 AM IST

ಸಾರಾಂಶ

ಹಾನಗಲ್ಲ ತಾಲೂಕಿನ ಬೆಳಗಾಲಪೇಟೆ ಗ್ರಾಮದಲ್ಲಿ ₹೩.೫೪ ಕೋಟಿ ವೆಚ್ಚದಲ್ಲಿ ಮನೆ ಮನೆಗೆ ಗಂಗೆ ಯೋಜನೆಗೆ ಭೂಮಿಪೂಜೆ, ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ₹೩೪ ಲಕ್ಷ ವೆಚ್ಚದಲ್ಲಿ ಎರಡು ಕೊಠಡಿಗಳ ನಿರ್ಮಾಣ ಕಾಮಗಾರಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಚಾಲನೆ ನೀಡಿದ್ದಾರೆ.

ಹಾನಗಲ್ಲ: ಹಾನಗಲ್ಲ ತಾಲೂಕಿಗೆ ಪ್ರಸಕ್ತ ವರ್ಷ ₹೭೦ ಕೋಟಿಗೂ ಅಧಿಕ ಅನುದಾನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಲಭಿಸಿದೆ. ಕೇವಲ ೮ ತಿಂಗಳ ಅವಧಿಯಲ್ಲಿ ನೂರು ಕೋಟಿ ರು.ಗೂ ಹೆಚ್ಚಿನ ಅನುದಾನ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.ತಾಲೂಕಿನ ಬೆಳಗಾಲಪೇಟೆ ಗ್ರಾಮದಲ್ಲಿ ₹೩.೫೪ ಕೋಟಿ ವೆಚ್ಚದಲ್ಲಿ ಮನೆ ಮನೆಗೆ ಗಂಗೆ ಯೋಜನೆಗೆ ಭೂಮಿಪೂಜೆ, ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ₹೩೪ ಲಕ್ಷ ವೆಚ್ಚದಲ್ಲಿ ಎರಡು ಕೊಠಡಿಗಳ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಬಜೆಟ್ ನಂತರ ಇನ್ನೂ ಹೆಚ್ಚಿನ ಅನುದಾನ ದೊರಕುವ ವಿಶ್ವಾಸವಿದ್ದು, ಮಹತ್ವಾಕಾಂಕ್ಷೆಯ ನೀರಾವರಿ ಯೋಜನೆಗಳ ಅನುಷ್ಠಾನ ಹಾಗೂ ಕಳೆದ ಹತ್ತಾರು ವರ್ಷಗಳಿಂದ ಪರಿಹಾರ ಕಾಣದೇ ನನೆಗುದಿಗೆ ಬಿದ್ದಿರುವ ಸಮಸ್ಯೆಗಳ ಪರಿಹಾರಕ್ಕೆ ಒತ್ತು ನೀಡಲಾಗಿದೆ ಎಂದರು.

ಗ್ರಾಪಂ ಅಧ್ಯಕ್ಷೆ ನೇತ್ರಾ ಕೋಬಳೆ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಶಕೀಲಾಬಾನು ಎಲಿಗಾರ, ಮುಖಂಡರಾದ ಶಿವಶಂಕ್ರಯ್ಯ ಹಿರೇಮಠ, ಪ್ರಶಾಂತ ಕಾಡಪ್ಪನವರ, ಮಾಬೂಲಿ ಹುದ್ದಾರ, ರಿಯಾಜ್‌ಅಹ್ಮದ್ ತಹಶೀಲ್ದಾರ್, ಪುಟ್ಟಯ್ಯ ಹಿರೇಮಠ, ವೀರೇಶ ಚಿಕ್ಕಮಠ, ಸಿದ್ದಲಿಂಗಪ್ಪ ಕಮಡೊಳ್ಳಿ, ಪ್ರಕಾಶ ಈಳಿಗೇರ, ಕೃಷ್ಣ ಉರಣಕರ, ರಾಕೇಶ ಉರಣಕರ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು, ಕಾಲೇಜು ಅಭಿವೃದ್ಧಿ ಸಲಹಾ ಸಮಿತಿ ಸದಸ್ಯರು, ಗ್ರಾಮಸ್ಥರು ಈ ಸಂದರ್ಭದಲ್ಲಿದ್ದರು.