ಆರ್ಥಿಕ ಶಕ್ತಿ ತುಂಬುವ ಯೋಜನೆಗಳತ್ತ ಚಿಂತನೆ ಹೆಚ್ಚಬೇಕು: ಡಾ. ನಿರ್ಮಲಾನಂದನಾಥ ಸ್ವಾಮೀಜಿ

| Published : Jan 05 2025, 01:31 AM IST

ಆರ್ಥಿಕ ಶಕ್ತಿ ತುಂಬುವ ಯೋಜನೆಗಳತ್ತ ಚಿಂತನೆ ಹೆಚ್ಚಬೇಕು: ಡಾ. ನಿರ್ಮಲಾನಂದನಾಥ ಸ್ವಾಮೀಜಿ
Share this Article
  • FB
  • TW
  • Linkdin
  • Email

ಸಾರಾಂಶ

ಪುತ್ತೂರು ಒಕ್ಕಲಿಗ ಗೌಡಸಂಘ ಹಾಗೂ ಸಹಸಂಸ್ಥೆಗಳ ಆಶ್ರಯದಲ್ಲಿ ಶನಿವಾರ ಪುತ್ತೂರು ತೆಂಕಿಲ ಗೌಡ ಸಮುದಾಯಭವನದಲ್ಲಿ ನಡೆದ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವ, ಸಾರ್ವಜನಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮದ ಸಭಾಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಪುತ್ತೂರು

ದೇಶಕ್ಕೆ ಶಕ್ತಿ ತುಂಬಿಸುವಂತಹ ಯೋಜನೆಗಳತ್ತ ನಾವು ದೃಷ್ಟಿ ಹರಿಸಬೇಕು. ಗೌಡ ಸಮುದಾಯಕ್ಕೆ ಆರ್ಥಿಕ ಶಕ್ತಿ ತುಂಬುವ ಸಮೃದ್ಧ ಯೋಜನೆಗಳತ್ತ ಚಿಂತನೆ ಹೆಚ್ಚಾಗಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.

ಅವರು ಪುತ್ತೂರು ಒಕ್ಕಲಿಗ ಗೌಡಸಂಘ ಹಾಗೂ ಸಹಸಂಸ್ಥೆಗಳ ಆಶ್ರಯದಲ್ಲಿ ಶನಿವಾರ ಪುತ್ತೂರು ತೆಂಕಿಲ ಗೌಡ ಸಮುದಾಯಭವನದಲ್ಲಿ ನಡೆದ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವ, ಸಾರ್ವಜನಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮದ ಸಭಾಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. ಮಂಗಳೂರು ಆದಿಚುಂಚನಗಿರಿ ಶಾಖಾ ಮಠದ ಡಾ. ಧರ್ಮಪಾಲನಾಥ ಸ್ವಾಮೀಜಿ ಆಶೀರ್ವಚನ ನೀಡಿದರು.

ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿದರು.

ಅಖಿಲ ಕರ್ನಾಟಕ ಮಹಿಳಾ ಒಕ್ಕಲಿಗರ ಘಟಕದ ರಾಜ್ಯಾಧ್ಯಕ್ಷೆ ಡಾ. ಶಾಂತ ಸುರೇಂದ್ರ ಗೌಡ, ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಮುಖ್ಯ ಪ್ರವರ್ತಕ ನ್ಯಾಯವಾದಿ ಮೋಹನ್ ಗೌಡ ಇಡ್ಯಡ್ಕ, ಶಮಾನೋತ್ಸವ ಸಮಿತಿ ಅಧ್ಯಕ್ಷ ಪಟೇಲ್ ಗೋಪಾಲಕೃಷ್ಣ ಗೌಡ ಚಾರ್ವಾಕ, ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು, ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಸ್ಥಾಪಕ ಅಧ್ಯಕ್ಷ ಎ.ವಿ. ನಾರಾಯಣ, ಟ್ರಸ್ಟ್ ಅಧ್ಯಕ್ಷ ಡಿ.ವಿ. ಮನೋಹರ್ ಮಾತನಾಡಿದರು.