ಅನೈತಿಕ ಸಾಗಾಣಿಕೆಗೆ ಹೆಚ್ಚು ಬಲಿ

| Published : Aug 03 2024, 12:37 AM IST

ಸಾರಾಂಶ

ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ

ಕನ್ನಡಪ್ರಭ ವಾರ್ತೆ ತುಮಕೂರು

ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆಗೆ ಹೆಚ್ಚು ಬಲಿಯಾಗುತ್ತಿದ್ದು, ಮಾನವ ಕಳ್ಳ ಸಾಗಾಣೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿ ವರ್ಷ ಜುಲೈ 30೦ ರಂದು ಅರಿವು ಮೂಡಿಸುವ ಕಾರ್ಯಕ್ರಮ ಆಚರಿಸಲಾಗುತ್ತಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ತುಮಕೂರು ವತಿಯಿಂದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದಡಿಯಲ್ಲಿ ನಡೆದ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಯಲ್ಲಿ ಮಾತನಾಡಿದರು.

ಮಹಿಳೆ ಮತ್ತು ಮಕ್ಕಳನ್ನು ಲೈಂಗಿಕ ಕೃತ್ಯಕ್ಕೆ ಬಳಸಿಕೊಳ್ಳುತ್ತಿದ್ದು, ಮಕ್ಕಳನ್ನು ಜೀತಪದ್ದತಿಗಾಗಿ ಕಾರ್ಮಿಕತೆಗೆ ತಳ್ಳುತ್ತಿದ್ದು, ನಗರ ಪ್ರದೇಶದಲ್ಲಿ ಮಾದಕ ವಸ್ತುಗಳ ಮಾಫಿಯಾಗೆ ಬಳಸಿಕೊಂಡು ಕೊಲೆ, ದರೋಡೆಯಂತಹ ಹೀನ ಕೃತ್ಯಕ್ಕೆ ಮಕ್ಕಳನ್ನು ತಳ್ಳಲಾಗುತ್ತಿದೆ. ಮಹಿಳೆಯರಿಗೆ ಉಡುಗೊರೆ, ಉದ್ಯೋಗದ ಅಮಿಷಾ ಒಡ್ಡಿ ಬಿಕ್ಷಾಟಣೆಯಲ್ಲಿ ಹಾಗೂ ವೇಶ್ಯಾವಾಟಿಕೆಗೆ ಬಳಸಿಕೊಳ್ಳಲಾಗುತ್ತಿದೆ ಎಂದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಬಸವರಾಜು.ಬಿ ಹಾಗೂ ಮರಿಯಪ್ಪ, ಸಂಪನ್ಮೂಲ ವ್ಯಕ್ತಿ.ಸಾ.ಚಿ.ರಾಜಕುಮಾರ್ , ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಪವಿತ್ರ.ಆರ್.ಜಿ, ಮಾತನಾಡಿದರು.

ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ನಿರೂಪಣಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಇಲಾಖಾ ಸಿಬ್ಬಂದಿ ವರ್ಗದವರು ಹಾಜರಿದ್ದರು.