ಸಾರಾಂಶ
ಕನ್ನಡಪ್ರಭ ವಾರ್ತೆ, ಚಾಮರಾಜನಗರ
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರಿಗೆ ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್ ಹೆಚ್ಚು ಮತ ಬಂದಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕಾಡಾಧ್ಯಕ್ಷ ಪಿ.ಮರಿಸ್ವಾಮಿ ಹೇಳಿದರು.ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ 1.83.327 ಮತಗಳ ಅಂತರದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದು ಇದು ಜಿಲ್ಲೆ ಮತ್ತೆ ಕಾಂಗ್ರೆಸ್ ಭದ್ರಕೋಟೆ ಎಂಬುದನ್ನು ಸಾಬೀತುಪಡಿಸಿದೆ ಎಂದರು.
5 ಗ್ಯಾರಂಟಿಗಳು ಜನತೆಗೆ ಪ್ರಾಮಾಣಿಕವಾಗಿ ತಲುಪುತ್ತಿದೆ. ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳು, ನಮ್ಮ ಪಕ್ಷದ ನಾಯಕತ್ವ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ದಕ್ಷ ಆಡಳಿತ ಪರಿಣಾಮದಿಂದ ಕಾಂಗ್ರೆಸ್ ಗೆ ಹೆಚ್ಚಿನ ಮತ ಬರಲು ಸಾಧ್ಯವಾಯಿತು. ಜನರು ಅಧಿಕ ಮತ ನೀಡುವ ಮೂಲಕ ಕಾಂಗ್ರೆಸ್ ಬೆಂಬಲಿಸಿದ್ದಾರೆ ಎಂದರು.ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಹಾಗೂ ಕ್ಷೇತ್ರ ಶಾಸಕರು, ಮಾಜಿ ಶಾಸಕರು, ಸಂಸದರು, ಬ್ಲಾಕ್ ಅಧ್ಯಕ್ಷರು, ಸಿದ್ದರಾಮಯ್ಯನವರ ಅನೇಕ ಭಾಗ್ಯ ಯೋಜನೆಗಳು, ದಿ. ಮಾಜಿ ಸಚಿವ ಹೆಚ್.ಎಸ್.ಮಹದೇವಪ್ಪ ಹಾಗೂ ಮಾಜಿ ಸಂಸದ ಆರ್.ಧ್ರುವನಾರಾಯಣ್ ಅವರ ಅಭಿವೃದ್ಧಿ ಕೆಲಸಗಳು ಕೂಡ ಪಕ್ಷದ ಗೆಲುವಿಗೆ ಕಾರಣವಾಗಿದೆ ಎಂದರು.
ಕಾಂಗ್ರೆಸ್ ದಾಖಲೆ ಗೆಲುವಿಗೆ ಶ್ರಮಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಮಾಜಿ ಶಾಸಕರು, ಮುಖಂಡರು, ಕಾರ್ಯಕರ್ತರು ಹಾಗೂ ಮತ ಹಾಕಿ ಬೆಂಬಲಿಸಿದ ಕ್ಷೇತ್ರದ ಮತದಾರರಿಗೆ ಈ ಮೂಲಕ ಅಭಿನಂದನೆ ಸಲ್ಲಿಸಲಾಗುತ್ತದೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಆರ್.ಮಹದೇವು, ಎಸ್ ಟಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪು. ಶ್ರೀನಿವಾಸನಾಯಕ, ಕನಿಷ್ಠ ವೇತನ ಸಲಹಾ ಸಮಿತಿ ಮಾಜಿ ಅಧ್ಯಕ್ಷ ಉಮೆಶ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಅಸ್ಗರ್, ತಾ.ಪಂ.ಮಾಜಿ ಸದಸ್ಯ ಪುಟ್ಟಸ್ವಾಮಿ ಹಾಜರಿದ್ದರು.