ಪ್ರಧಾನಿ ರೋಡ್‌ಶೋಗೆ ಹೆಚ್ಚಿನ ಕಾರ್ಯಕರ್ತರು: ಕ್ಯಾ.ಬ್ರಿಜೇಶ್‌ ಚೌಟ

| Published : Apr 13 2024, 01:04 AM IST / Updated: Apr 13 2024, 01:05 AM IST

ಪ್ರಧಾನಿ ರೋಡ್‌ಶೋಗೆ ಹೆಚ್ಚಿನ ಕಾರ್ಯಕರ್ತರು: ಕ್ಯಾ.ಬ್ರಿಜೇಶ್‌ ಚೌಟ
Share this Article
  • FB
  • TW
  • Linkdin
  • Email

ಸಾರಾಂಶ

ಕ್ಯಾ.ಬ್ರಿಜೇಶ್‌ ಚೌಟ ಅವರು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ಮಂಗಳೂರಿನಲ್ಲಿ ಏ.14ರಂದು ನಡೆಯುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬೃಹತ್‌ ರೋಡ್‌ ಶೋ ಸಂದರ್ಭ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಬೇಕು. ಪ್ರಧಾನಿಯವರನ್ನು ಹತ್ತಿರದಿಂದ ಭೇಟಿ ಮಾಡುವ ಅವಕಾಶ ರೋಡ್ ಶೋ ಸಂದರ್ಭ ಸಿಗಲಿದ್ದು, ಮೂರನೇ ಬಾರಿ ದೇಶದ ಪ್ರಧಾನಿಯಾಗುತ್ತಿರುವ ನರೇಂದ್ರ ಮೋದಿಯವರ ಕಾರ್ಯಕ್ರಮದಲ್ಲಿ ಹೆಚ್ಚಿನ‌ ಸಂಖ್ಯೆಯಲ್ಲಿ ಭಾಗಿಯಾಗಿ ಅಭೂತಪೂರ್ವ ಬೆಂಬಲ ಸೂಚಿಸಬೇಕು ಎಂದು ದ.ಕ. ಲೋಕಸಭಾ ಬಿಜೆಪಿ ಅಭ್ಯರ್ಥಿ ಕಾಪ್ಟನ್‌ ಬ್ರಿಜೇಶ್‌ ಚೌಟ ಮನವಿ ಮಾಡಿದರು.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಗುರುವಾರ ಕಾರ್ಯಕರ್ತರ, ಪ್ರಮುಖ ಮುಖಂಡರ ಮನೆಗಳಿಗೆ ಭೇಟಿ ನೀಡಿದ ಸಂದರ್ಭ ಮಾತನಾಡಿದರು.

ಕಾರ್ಯಕರ್ತರ ಭೇಟಿಯ ಸಂದರ್ಭ ಸಿಗುವ ಸಲಹೆ, ಮೂಡುವ ಜನಾಭಿಪ್ರಾಯಗಳನ್ನು ಆಧರಿಸಿ ಅವುಗಳನ್ನು ಕಾರ್ಯರೂಪಕ್ಕೆ ತರುವ ಇಚ್ಛೆ ಹೊಂದಿದ್ದೇನೆ. ಚುನಾವಣಾ ಪ್ರಚಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿರುವ ಕಾರ್ಯಕರ್ತರ ಉತ್ಸಾಹದಿಂದ ನನಗೆ ಹೆಚ್ಚಿನ ಬಲ ಬಂದಂತಾಗಿದೆ ಎಂದರು.ಕ್ಯಾ.ಬ್ರಿಜೇಶ್‌ ಚೌಟ ಅವರು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು.