ಮೊಸರು ಕುಡಿಕೆ ಉತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

| Published : Jul 09 2025, 12:25 AM IST

ಸಾರಾಂಶ

೧೫ನೇ ವರುಷದ ಪುತ್ತೂರು ಮೊಸರುಕುಡಿಕೆ ಉತ್ಸವ ಮತ್ತು ಶೋಭಯಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸೋಮವಾರ ಪುತ್ತೂರಿನ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಪುತ್ತೂರು

ವಿಶ್ವ ಹಿಂದೂ ಪರಿಷದ್ ಬಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ಹಾಗೂ ವಿಶ್ವ ಹಿಂದು ಪರಿಷದ್‌ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ನಡೆಯುವ ೧೫ನೇ ವರುಷದ ಪುತ್ತೂರು ಮೊಸರುಕುಡಿಕೆ ಉತ್ಸವ ಮತ್ತು ಶೋಭಯಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸೋಮವಾರ ಪುತ್ತೂರಿನ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.ಆಮಂತ್ರಣ ಪತ್ರಿಕೆಯನ್ನು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಯ ಸಂಚಾಲಕ ಅರುಣ್ ಕುಮಾರ್ ರೈ ಆನಾಜೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಬಜರಂಗದಳದ ಮುಖಂಡ ಮುರಳೀಕೃಷ್ಣ ಹಸಂತ್ತಡ್ಕ, ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಅಧ್ಯಕ್ಷ ಡಾ. ಕೃಷ್ಣ ಪ್ರಸನ್ನ, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ, ಜಿಲ್ಲಾ ಸಹ ಸಂಯೋಜಕ್ ಪ್ರವೀಣ್ ಕಲ್ಲೇಗ, ಪುತ್ತೂರು ನಗರ ಪ್ರಖಂಡ ಅಧ್ಯಕ್ಷ ದಾಮೋದರ ಪಾಟಾಳಿ, ಪುತ್ತೂರು ಗ್ರಾಮಾಂತರ ಪ್ರಖಂಡ ಅಧ್ಯಕ್ಷ ಜಯಂತ್ ಶೆಟ್ಟಿ ಕಂಬಳತ್ತಡ್ಡ, ನಗರ ಸಂಯೋಜಕ ಜಯಂತ್ ಕುಂಜೂರು ಪಂಜ, ಮೊಸರು ಕುಡಿಕೆ ಉತ್ಸವ ಸಮಿತಿ ಕೋಶಾಧಿಕಾರಿ ಕೇಶವ ಪ್ರಸಾದ್ ಬಿ.ವಿ, ಪುತ್ತೂರು ನಗರ ಕಾರ್ಯದರ್ಶಿ ಜಿತೇಶ್ ಬಲ್ನಾಡು, ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಹ ಸಂಯೋಜಕ ದಿನೇಶ್ ಪಂಜಿಗ, ಬಿಜೆಪಿ ಮುಖಂಡ ಯುವರಾಜ್ ಪೇರಿಯತ್ತೋಡಿ ಮತ್ತತ್ತಿರರು ಇದ್ದರು.