ನವಜಾತ ಶಿಶು ಆಸ್ಪತ್ರೆಯಲ್ಲಿ ಬಿಟ್ಟು ತಾಯಿ ಪರಾರಿ..!

| Published : Apr 13 2025, 02:07 AM IST

ಸಾರಾಂಶ

ಹೆರಿಗೆ ಬಳಿಕ ಬಾಣಂತಿ ನವಜಾತ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪರಾರಿಯಾದ ಘಟನೆ ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಈಚೆಗೆ ನಡೆದಿದೆ.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಹೆರಿಗೆ ಬಳಿಕ ಬಾಣಂತಿ ನವಜಾತ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪರಾರಿಯಾದ ಘಟನೆ ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಈಚೆಗೆ ನಡೆದಿದೆ.

ನವನಗರದ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಗೆ ದಾಖಲಾಗಿದ್ದ ಮಹಿಳೆ ಮಗುವಿಗೆ ಜನ್ಮ ನೀಡಿದ ಬಳಿಕ ಆಸ್ಪತ್ರೆ ಸಿಬ್ಬಂದಿ ಓಪಿಡಿ ಮಾಡಿಸಿ, ತಾಯಿ ಕಾರ್ಡ್‌ ಕೊಡಿ ಎಂದು ಕೇಳಿದ್ದಾಳೆ. ನಂತರ ಸುಮ್ಮನಾದ ಬಾಣಂತಿ ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಕಣ್ಮರೆಯಾಗಿದ್ದಾರೆ. ಮಹಿಳೆ ಆಸ್ಪತ್ರೆಯಿಂದ ಹೋಗುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೆಣ್ಣು ಮಗುವೆಂಬ ಕಾರಣಕ್ಕೆ ಮಗು ಬಿಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಒಂದು ದಿನ ಖಾಸಗಿ ಆಸ್ಪತ್ರೆ ಸಿಬ್ಬಂದಿ ಮಗುವಿನ ಪಾಲಕರಿಗೆ ಕಾದರೂ ಪಾಲಕರು ಬಂದಿಲ್ಲ. ಬಳಿಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಡಾಪ್ಷನ್ ಸೆಂಟರ್‌ಗೆ ಕರೆ ಮಾಡಿ ಮಾಹಿತಿ ನೀಡಿದ ಆಸ್ಪತ್ರೆ ಸಿಬ್ಬಂದಿ, ಮಗುವಿಗೆ ಜಿಲ್ಲಾಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಪೌಡರ್ ಹಾಲು ನೀಡಲಾಗುತ್ತಿದೆ. ಸದ್ಯ ಮಗು ಆರೋಗ್ಯವಾಗಿದೆ.