ಸಾರಾಂಶ
ಹಾವೇರಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಯ ಹಣ ಕೂಡಿಟ್ಟ ಅತ್ತೆಯೊಬ್ಬರು ತಮ್ಮ ಸೊಸೆಗೆ ಫ್ಯಾನ್ಸಿ ಸ್ಟೋರ್ ತೆರೆಯುವ ಮೂಲಕ ಗಮನ ಸೆಳೆದಿದ್ದಾರೆ.ಹೌದು, ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ನೀರಲಗಿ ಗ್ರಾಮದ ದ್ರಾಕ್ಷಾಯಿಣಿ ಪಾಟೀಲ ಅವರು ತಮ್ಮ 10 ಕಂತಿನ ಗೃಹಲಕ್ಷ್ಮಿ ಹಣ ಕೂಡಿಟ್ಟು, ₹20 ಸಾವಿರದಲ್ಲಿ ತಮ್ಮ ಸೊಸೆ ಕುಮಾರಿ ಶಿವನಗೌಡ ಪಾಟೀಲ್‌ಗೆ ಮನೆಯಲ್ಲೇ ಫ್ಯಾನ್ಸಿ ಸ್ಟೋರ್ ತೆರೆದಿದ್ದಾರೆ. ಈ ಮೂಲಕ ಅತ್ತೆ-ಸೊಸೆ ಜೋಡಿ ಇತರರಿಗೆ ಮಾದರಿಯಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರವು ರಾಜ್ಯದ ಹೆಣ್ಣುಮಕ್ಕಳಿಗಾಗಿ ತನ್ನ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಾಗ ವಿರೋಧಿಗಳು ಅದರ ಬಗ್ಗೆ ಅಪಸ್ವರ ಎತ್ತಿದ್ದರು. ಆದರೆ ಈ ಅತ್ತೆ-ಸೊಸೆ ಜೋಡಿ ಗೃಹಲಕ್ಷ್ಮಿ ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಬದುಕು ಕಟ್ಟಿಕೊಳ್ಳುತ್ತಿದ್ದಾರೆ.ಅತ್ತೆ ದ್ರಾಕ್ಷಾಯಿಣಿ ಗೃಹಲಕ್ಷ್ಮೀ ಯೋಜನೆ ಹಣದಲ್ಲಿ ಒಂದು ಪೈಸೆಯನ್ನೂ ಪೋಲು ಮಾಡದೇ ಕೂಡಿಟ್ಟು, ₹20 ಸಾವಿರಕ್ಕೂ ಹೆಚ್ಚು ಹಣ ಸಂಗ್ರಹಿಸಿ ಸೊಸೆಯ ಕೈಗೆ ಕೊಟ್ಟಿದ್ದಾರೆ. ಈ ಹಣದಲ್ಲಿ ಸೊಸೆ ಕುಮಾರಿ ಶಿವನಗೌಡ ಪಾಟೀಲ್ ಮನೆಯಲ್ಲೇ ನೂತನವಾಗಿ ಫ್ಯಾನ್ಸಿ ಸ್ಟೋರ್ ತೆರೆದಿದ್ದಾರೆ. ಶ್ರಾವಣ ಮಾಸದ ಮಂಗಳವಾರದ ಶುಭದಿನದಂದೇ ಫ್ಯಾನ್ಸಿ ಸ್ಟೋರ್‌ಗೆ ಪೂಜೆ ಮಾಡಿ ಚಾಲನೆ ನೀಡಲಾಗಿದೆ. ದ್ರಾಕ್ಷಾಯಿಣಿ ಅವರ ಈ ಕಾರ್ಯಕ್ಕೆ ನೀರಲಗಿ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.ಗೃಹಲಕ್ಷ್ಮೀ ಯೋಜನೆ ನಮ್ಮಂತ ಬಡ ಕುಟುಂಬಳಿಗೆ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಕಳೆದ 10 ಕಂತಿನ ಗೃಹಲಕ್ಷ್ಮಿ ಹಣ ಕೂಡಿಟ್ಟು ಸೊಸೆಗೆ ಮನೆಯಲ್ಲೇ ಫ್ಯಾನ್ಸಿ ಸ್ಟೋರ್ ತೆರೆದೆ. ಇದರಿಂದಾಗಿ ಸೊಸೆ ಹೊರಗಡೆ ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಇದ್ದುಕೊಂಡು ಉದ್ಯೋಗ ಮಾಡಬಹುದಾಗಿದೆ ಎಂದು ಹೇಳುತ್ತಾರೆ ಅತ್ತೆ ದ್ರಾಕ್ಷಾಯಿಣಿ ಪಾಟೀಲ.
;Resize=(128,128))
;Resize=(128,128))
;Resize=(128,128))
;Resize=(128,128))