ಪೂರ್ಣಪ್ರಜ್ಞಾ ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಕ್ರಮ

| Published : Jul 01 2025, 12:48 AM IST

ಪೂರ್ಣಪ್ರಜ್ಞಾ ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಕ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಿ, ಲೌಕಿಕ ಶಿಕ್ಷಣದೊಂದಿಗೆ ಅಧ್ಯಾತ್ಮಿಕ ಶಿಕ್ಷಣವೂ ಅಗತ್ಯ. ಬಲಿಷ್ಠ ದೇಶವನ್ನು ಕಟ್ಟಲು ತಂತ್ರಜ್ಞಾನದೊಂದಿಗೆ ಮೌಲ್ಯಾಧಾರಿತ, ನೈತಿಕ ಶಿಕ್ಷಣ ಬೇಕು. ವಿದ್ಯಾರ್ಥಿಗಳು ಶಿಕ್ಷಣವನ್ನು ಆನಂದಿಸಬೇಕು. ಸಮಯವನ್ನು ವ್ಯರ್ಥ ಮಾಡಬಾರದು ಎಂದು ಹರಸಿದರು.

ಕನ್ನಡಪ್ರಭ ವಾರ್ತೆ ಉಡುಪಿನಗರದ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ಪ್ರಥಮ ವರ್ಷದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗಾಗಿ ಪ್ರೇರಣಾ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಿ, ಲೌಕಿಕ ಶಿಕ್ಷಣದೊಂದಿಗೆ ಅಧ್ಯಾತ್ಮಿಕ ಶಿಕ್ಷಣವೂ ಅಗತ್ಯ. ಬಲಿಷ್ಠ ದೇಶವನ್ನು ಕಟ್ಟಲು ತಂತ್ರಜ್ಞಾನದೊಂದಿಗೆ ಮೌಲ್ಯಾಧಾರಿತ, ನೈತಿಕ ಶಿಕ್ಷಣ ಬೇಕು. ವಿದ್ಯಾರ್ಥಿಗಳು ಶಿಕ್ಷಣವನ್ನು ಆನಂದಿಸಬೇಕು. ಸಮಯವನ್ನು ವ್ಯರ್ಥ ಮಾಡಬಾರದು ಎಂದು ಹರಸಿದರು.ಸಂಸ್ಥೆಗಳ ಗೌರವ ಪ್ರಧಾನ ಕಾರ್ಯದರ್ಶಿ ಡಾ.ಎ.ಪಿ. ಭಟ್ ಮಾತನಾಡಿ, ನಮ್ಮ ಆಡಳಿತ ಮಂಡಳಿಯು ಪ್ರಸಕ್ತ ೨೦೨೫ನೇ ಸಾಲಿನ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸುಮಾರು ೩೦ ಲಕ್ಷ ರು. ಶುಲ್ಕ ಭರಿಸಿ ಗುಣಮಟ್ಟದ ಶಿಕ್ಷಣ ನೀಡಿ ಮಕ್ಕಳ ಭವಿಷ್ಯ ರೂಪಿಸಲು ಮುಂದಾಗಿದೆ. ಈ ವಿದ್ಯಾರ್ಥಿಗಳು ಮುಂದಿನ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲೂ ಉತ್ಕೃಷ್ಟ ಸಾಧನೆ ಮಾಡಿ ಭವಿಷ್ಯ ಕಟ್ಟಿಕೊಂಡಾಗ ಸಾರ್ಥಕವಾಗುತ್ತದೆ ಎಂದು ಹೇಳಿದರು.ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ಗೌರವ ಕಾರ್ಯದರ್ಶಿ ಡಾ.ಶ್ರೀರಮಣ ಐತಾಳ್, ಕಾಲೇಜಿನ ಪ್ರಾಚಾರ್ಯ ಸಂತೋಷ್ ಕುಮಾರ್ ಉಪಸ್ಥಿತರಿದ್ದರು. ಆಂಗ್ಲಭಾಷಾ ಪ್ರಾಧ್ಯಾಪಿಕೆ ಸೀಮಾ ಕ್ರಾಸ್ತಾ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ರಮಾನಂದ ರಾವ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.