ಸಾರಾಂಶ
ತೀಯ ಪಿಯು ಪರೀಕ್ಷೆಯಲ್ಲಿ ಮೆಣಸೂರು ಗ್ರಾಮದ ಮೌಂಟ್ ಕಾರ್ಮಲ್ ಪದವಿ ಪೂರ್ವ ಕಾಲೇಜು ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ಶೇ.100ರಷ್ಟು ಫಲಿತಾಂಶ ಪಡೆದುಕೊಂಡಿದೆ ಎಂದು ಸಿಸ್ಟರ್ ಉಷಾ ತಿಳಿಸಿದ್ದಾರೆ.
ನರಸಿಂಹರಾಜಪುರ: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಮೆಣಸೂರು ಗ್ರಾಮದ ಮೌಂಟ್ ಕಾರ್ಮಲ್ ಪದವಿ ಪೂರ್ವ ಕಾಲೇಜು ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ಶೇ.100ರಷ್ಟು ಫಲಿತಾಂಶ ಪಡೆದುಕೊಂಡಿದೆ ಎಂದು ಸಿಸ್ಟರ್ ಉಷಾ ತಿಳಿಸಿದ್ದಾರೆ.
ಕಲಾ ಮತ್ತು ವಾಣಿಜ್ಯ ವಿಭಾಗದಿಂದ ಒಟ್ಟು 33 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 33 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 5 ವಿದ್ಯಾರ್ಥಿಗಳು ಅತ್ಯುನ್ನತ ದರ್ಜೆಯಲ್ಲಿ, 22 ವಿದ್ಯಾರ್ಥಿಗಳು ಪ್ರಥಮ ದರ್ಜೆ, 6 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ರಿತಿನ್ 559 ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಟಿ.ಎಸ್.ಜೋಯೆಲ್ 524, ಅನನ್ಯ ಶೆಟ್ಟಿ, ರಿಜ್ವಾನ್, ಸಾಧನಾ 515 ಅಂಕ ಪಡೆದುಕೊಂಡಿದ್ದಾರೆ.ಕಲಾ ವಿಭಾಗದಲ್ಲಿ ರತ್ನಾ 432 ಅಂಕ ಪಡೆದು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಮುತ್ತಿನಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇ.100ರಷ್ಟು ಫಲಿತಾಂಶ ಪಡೆದುಕೊಂಡಿದೆ. ಕಾಲೇಜಿನ 12 ವಿದ್ಯಾರ್ಥಿಗಳು ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದಿದ್ದರು. 4 ವಿದ್ಯಾರ್ಥಿಗಳು ಅತ್ಯುನ್ನುತ ದರ್ಜೆ, 4 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ 4 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆಂದು ಪ್ರಾಂಶುಪಾಲರು ತಿಳಿಸಿದ್ದಾರೆ.