ಸಾರಾಂಶ
ಕರ್ನಾಟಕ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಯಿಂದ ಪ್ರಸಕ್ತ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ ಪೂರ್ವ ಕಾಲೇಜು ಆರಂಭಿಸಲಾಗುವುದು ಎಂದು ಸಂಸ್ಥೆಯ ಸಹಸಂಸ್ಥಾಪಕ ಆಸೀಫ್ ಸಯ್ಯದ್ ಹೇಳಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಕರ್ನಾಟಕ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಯಿಂದ ಪ್ರಸಕ್ತ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ ಪೂರ್ವ ಕಾಲೇಜು ಆರಂಭಿಸಲಾಗುವುದು ಎಂದು ಸಂಸ್ಥೆಯ ಸಹಸಂಸ್ಥಾಪಕ ಆಸೀಫ್ ಸಯ್ಯದ್ ಹೇಳಿದರು.ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಯಿಂದ ಮೌಂಟ್ ಸಿನೈ ಕಾಲೇಜನ್ನು ಆರಂಭಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗವನ್ನು ಆರಂಭಿಸಲಾಗುತ್ತಿದೆ. ಅಲ್ಲದೇ ಶೇ.95ಕ್ಕಿಂತ ಹೆಚ್ಚು ಅಂಕ ಪಡೆದ 10 ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ನೀಡಲಾಗುವುದು ಎಂದು ತಿಳಿಸಿದರು.ಕಾಲೇಜಿನ ಪ್ರಾಚಾರ್ಯ ಸೈಪ್ ಅಲಮ್ ಮಾತನಾಡಿ, ಶಿಕ್ಷಣದ ಜತೆಗೆ ನೀಟ್, ಜೀ, ಕೆಸೆಟ್, ಸಿಎ ಫೌಂಡೇಶನ್, ಸಿಎಸ್ ಫೌಂಡೇಶನ್, ಐಬಿಪಿಎಸ್, ಎನ್‌ಡಿಎ, ಆರ್‌ಆರ್‌ಬಿ ಸೇರಿದಂತೆ ಇನ್ನೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನುರಿತ ಶಿಕ್ಷಕರಿಂದ ತರಬೇತಿ ನೀಡಲಾಗುವುದು ಎಂದು ವಿವರಿಸಿದರು.ಗೋಷ್ಠಿಯಲ್ಲಿ ಅಲ್ತಾಫ್ ಬಾಮ್ದಾರ್, ಫಿರೋಜ್ ಜಮಾದಾರ ಸೇರಿದಂತೆ ಮೊಲಾದವರು ಉಪಸ್ಥಿತರಿದ್ದರು.
ಕರ್ನಾಟಕ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಯಿಂದ ಮೌಂಟ್ ಸಿನೈ ಕಾಲೇಜನ್ನು ಆರಂಭಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗವನ್ನು ಆರಂಭಿಸಲಾಗುತ್ತಿದೆ. ಅಲ್ಲದೇ ಶೇ.95ಕ್ಕಿಂತ ಹೆಚ್ಚು ಅಂಕ ಪಡೆದ 10 ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ನೀಡಲಾಗುವುದು.-ಆಸೀಫ್ ಸಯ್ಯದ್,
ಕರ್ನಾಟಕ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಯ ಸಹಸಂಸ್ಥಾಪಕರು.ಶಿಕ್ಷಣದ ಜತೆಗೆ ನೀಟ್, ಜೀ, ಕೆಸೆಟ್, ಸಿಎ ಫೌಂಡೇಶನ್, ಸಿಎಸ್ ಫೌಂಡೇಶನ್, ಐಬಿಪಿಎಸ್, ಎನ್‌ಡಿಎ, ಆರ್‌ಆರ್‌ಬಿ ಸೇರಿದಂತೆ ಇನ್ನೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನುರಿತ ಶಿಕ್ಷಕರಿಂದ ತರಬೇತಿ ನೀಡಲಾಗುವುದು.-ಸೈಪ್ ಅಲಮ್,
ಮೌಂಟ್ ಸಿನೈ ಕಾಲೇಜಿನ ಪ್ರಾಚಾರ್ಯರು.