ಸಾರಾಂಶ
ತಿಕೋಟಾ: ಸೋಮವಾರ ರಾತ್ರಿ ಸುರಿದ ಭಾರೀ ಮಳೆಗೆ ಹಳ್ಳ ಹಾಗೂ ಬಾಂದಾರಗಳು ತುಂಬಿ ಹರಿಯುತ್ತಿದ್ದು, ರೈತರ ತೋಟಗಳಿಗೆ ನೀರು ನುಗ್ಗಿದ್ದರಿಂದ ದ್ರಾಕ್ಷಿ ತೋಟಗಳು ನೀರಲ್ಲೆ ನಿಂತಿವೆ. ತಾಲ್ಲೂಕಿನ ಕಳ್ಳಕವಟಗಿ ಗ್ರಾಮದ ಸಂಗಮನಾಥ ಹಳ್ಳದ ಬಾಂದಾರ ತುಂಬಿ ಅಪಾಯಮಟ್ಟದಲ್ಲಿ ಹರಿಯುತ್ತಿದೆ.
ತಿಕೋಟಾ: ಸೋಮವಾರ ರಾತ್ರಿ ಸುರಿದ ಭಾರೀ ಮಳೆಗೆ ಹಳ್ಳ ಹಾಗೂ ಬಾಂದಾರಗಳು ತುಂಬಿ ಹರಿಯುತ್ತಿದ್ದು, ರೈತರ ತೋಟಗಳಿಗೆ ನೀರು ನುಗ್ಗಿದ್ದರಿಂದ ದ್ರಾಕ್ಷಿ ತೋಟಗಳು ನೀರಲ್ಲೆ ನಿಂತಿವೆ. ತಾಲ್ಲೂಕಿನ ಕಳ್ಳಕವಟಗಿ ಗ್ರಾಮದ ಸಂಗಮನಾಥ ಹಳ್ಳದ ಬಾಂದಾರ ತುಂಬಿ ಅಪಾಯಮಟ್ಟದಲ್ಲಿ ಹರಿಯುತ್ತಿದೆ. ಸೇತುವೆಯ ಮೇಲೆ ನೀರು ಹರಿಯುತ್ತಿದ್ದರೂ ಅಪಾಯವನ್ನು ಲೆಕ್ಕಿಸದೇ ಜನರು ನೀರಿನಲ್ಲಿಯೇ ಸಂಚರಿಸುತ್ತಿದ್ದಾರೆ. ಅಪಾರ ಪ್ರಮಾಣದಲ್ಲಿ ನೀರು ಹರಿಯುತ್ತಿರುವುದರಿಂದ ವಾಹನ ಸವಾರರಿಗೆ ಸಂಚಾರಕ್ಕೆ ತೊಂದರೆಯಾಗಿದ್ದು, ಸಂಚಾರ ಬಂದ್ ಆದಂತಾಗಿದೆ. ಸಂಗಮನಾಥ ದೇವಾಲಯದ ಗರ್ಭ ಗುಡಿಯೊಳಗೆ ನೀರು ನುಗ್ಗಿದ್ದರಿಂದ ಪೂಜಾ ಕೈಂಕರ್ಯ ಸ್ಥಗಿತಗೊಂಡಿವೆ.
ಮಳೆಯಿಂದಾಗಿ ಡೋಣಿ ನದಿ ಕೂಡ ತುಂಬಿ ಹರಿಯುತ್ತಿದೆ. ರೈತರ ಜಮೀನುಗಳಿಗೆ ನೀರು ನುಗ್ಗಿದ್ದರಿಂದ ತೊಗರಿ ಸೇರಿದಂತೆ ಇತರೆ ಬೆಳೆಗಳು ಜಲಾವೃತವಾಗಿವೆ.