ಸಾರಾಂಶ
ಧರೆಕೊಪ್ಪ ಪಂಚಾಯಿತಿ ವ್ಯಾಪ್ತಿಯ ತೀರ್ಥಹಳ್ಳಿ ಶೃಂಗೇರಿ ರಾಜ್ಯ ಹೆದ್ದಾರಿ ಹೊಳೆಕೊಪ್ಪ ಬಳಿ ಚಲಿಸುತ್ತಿದ್ದ ಕಾರ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಭಾನುವಾರ ನಡೆದಿದೆ.
ಶೃಂಗೇರಿ: ತಾಲೂಕಿನ ಧರೆಕೊಪ್ಪ ಪಂಚಾಯಿತಿ ವ್ಯಾಪ್ತಿಯ ತೀರ್ಥಹಳ್ಳಿ ಶೃಂಗೇರಿ ರಾಜ್ಯ ಹೆದ್ದಾರಿ ಹೊಳೆಕೊಪ್ಪ ಬಳಿ ಚಲಿಸುತ್ತಿದ್ದ ಕಾರ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಭಾನುವಾರ ನಡೆದಿದೆ.
ಶೃಂಗೇರಿಯಿಂದ ತೀರ್ಥಹಳ್ಳಿಯತ್ತ ಚಲಿಸುತ್ತಿದ್ದ ಓಮಿನಿ ಕಾರ್ ಗೆ ಇದ್ದಕ್ಕಿದ್ದಂತೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮವಾಗಿ ಕಾರ್ ಬೆಂಕಿಗಾಹುತಿಯಾಗಿದ್ದು, ಕಾರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಆ ಸಮಯದಲ್ಲಿ ರಸ್ತೆಯಲ್ಲಿ ಯಾವುದೇ ವಾಹನಗಳು, ಜನ ಸಂಚಾರ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ. ಕಾರ್ ಗೆ ಬೆಂಕಿ ಹೊತ್ತಿ ಉರಿಯುತ್ತಿದ್ದರಿಂದ ಸುತ್ತಮುತ್ತಲ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿತ್ತು.