ಸಾರಾಂಶ
ಇದಕ್ಕೆ ಉತ್ತರ ನೀಡಿದ ಅರಣ್ಯ ಸಚಿವರು, ಅರಣ್ಯಗಳು. ಅಭಯಾರಣ್ಯಗಳು ಹಾಗೂ ರಾಷ್ಟ್ರೀಯ ಉದ್ಯಾನಗಳನ್ನು ಡಿ-ನೋಟಿಫಿಕೇಶನ್ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಈ ಹಿಂದೆಯೇ ಸೂಚಿಸಿದೆ. ಈ ಹಿನ್ನೆಲೆ ಸುಪ್ರೀಂ ಕೋರ್ಟಿನ ಒಪ್ಪಿಗೆ ಪಡೆದು ಮುಂದಿನ ಕ್ರಮಕ್ಕಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಶರಾವತಿ ಸಂತ್ರಸ್ತರಿಗೆ ಶಾಶ್ವತ ಪರಿಹಾರ ದೊರಕಿಸಿಕೊಡುವ ದೃಷ್ಟಿಯಿಂದ ಶರಾವತಿ ಅಭಿಯಾರಣ್ಯ ಪ್ರದೇಶದ ಸುಮಾರು 9139 ಎಕರೆ ಪ್ರದೇಶವನ್ನು ಸುಪ್ರೀಂ ಕೋರ್ಟಿನ ಒಪ್ಪಿಗೆ ಪಡೆದು ಮುಂದಿನ ಕ್ರಮಕ್ಕಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸೂಚಿನೆ ನೀಡಲಾಗಿದೆ ಎಂದು ಕೇಂದ್ರ ಅರಣ್ಯ ಪರಿಸರ ಹಾಗೂ ತಾಪಮಾನ ಬದಲಾವಣೆ ಖಾತೆ ರಾಜ್ಯ ಸಚಿವ ಅಶ್ವಿನ್ ಕುಮಾರ್ ಚೌಬೆ ತಿಳಿಸಿದ್ದಾರೆ.ಲೋಕಸಭೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಶರಾವತಿ ಹೈಡ್ರೋ ಪವರ್ ಪ್ರಾಜೆಕ್ಟ್‌ನಿಂದ ನಿರಾಶ್ರಿತರಾದ ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ನೀಡುವ ದಿಕ್ಕಿನಲ್ಲಿ ಸುಮಾರು 9139 ಎಕರೆ ಪ್ರದೇಶವನ್ನು ಡಿ ನೋಟಿಫೈ ಮಾಡಲು ಕೇಂದ್ರ ಸರ್ಕಾರವು ಇತ್ತೀಚಿನ ದಿನಗಳಲ್ಲಿ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಲೋಕಸಭಾ ಪ್ರಶ್ನಾವಳಿ ಸಮಯದಲ್ಲಿ ಮಾಹಿತಿ ಕೋರಿದ್ದರು.
ಇದಕ್ಕೆ ಉತ್ತರ ನೀಡಿದ ಅರಣ್ಯ ಸಚಿವರು, ಅರಣ್ಯಗಳು. ಅಭಯಾರಣ್ಯಗಳು ಹಾಗೂ ರಾಷ್ಟ್ರೀಯ ಉದ್ಯಾನಗಳನ್ನು ಡಿ-ನೋಟಿಫಿಕೇಶನ್ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಈ ಹಿಂದೆಯೇ ಸೂಚಿಸಿದೆ. ಈ ಹಿನ್ನೆಲೆ ಸುಪ್ರೀಂ ಕೋರ್ಟಿನ ಒಪ್ಪಿಗೆ ಪಡೆದು ಮುಂದಿನ ಕ್ರಮಕ್ಕಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.ಶರಾವತಿ ಸಂತ್ರಸ್ತರಿಗೆ ಡಿ ನೋಟಿಫಿಕೇಶನ್ ಮಾಡಲು ಹಿಂದಿನ ಬಿಜೆಪಿ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರವು ಇದೇ ವರ್ಷ ಮಾರ್ಚ್‌ನಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿತ್ತು ಎಂಬುದನ್ನು ಕೂಡ ತಿಳಿಸಿದ್ದಾರೆ.
- - --ಫೋಟೋ:
ಬಿ.ವೈ. ರಾಘವೇಂದ್ರ, ಸಂಸದ, ಶಿವಮೊಗ್ಗ ಲೋಕಸಭಾ ಕ್ಷೇತ್ರ