ಸಾರಾಂಶ
ಪ್ರಧಾನ ಮಂತ್ರಿ ಜನ್ ಜಾತೀಯ ಆದಿವಾಸಿ ನ್ಯಾಯ ಮಹಾ ಅಭಿಯಾನ ಯೋಜನೆಯಡಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಸಂಸದರು ತಿಳಿಸಿದರು.
ಗುಂಡ್ಲುಪೇಟೆ: ತಾಲೂಕಿನ ಮೇಲುಕಾಮನಹಳ್ಳಿ ಬಳಿ ೬೦ ಲಕ್ಷ ರು. ವೆಚ್ಚದ ಮಲ್ಟಿ ಪರ್ಪಸ್ ಸೆಂಟರ್ ಕಟ್ಟಡಕ್ಕೆ ಸಂಸದ ಸುನೀಲ್ ಬೋಸ್, ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಜೊತೆಗೂಡಿ ಭೂಮಿ ಪೂಜೆ ನೆರವೇರಿಸಿದರು. ಪ್ರಧಾನ ಮಂತ್ರಿ ಜನ್ ಜಾತೀಯ ಆದಿವಾಸಿ ನ್ಯಾಯ ಮಹಾ ಅಭಿಯಾನ ಯೋಜನೆಯಡಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಸಂಸದರು ತಿಳಿಸಿದರು. ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್.ಎಸ್.ನಂಜುಂಡ ಪ್ರಸಾದ್, ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎನ್.ನಂದಕುಮಾರ್, ಮುಖಂಡ ಇಂಧನ್ ಬಾಬು, ಗ್ರಾಪಂ ಅಧ್ಯಕ್ಷ ರಾಜಪ್ಪ, ಉಪಾಧ್ಯಕ್ಷ ನಾಗರಾಜು, ಮುಖಂಡರಾದ ನೀಲಕಂಠಪ್ಪ, ಮುದ್ದಯ್ಯ, ಪುಟ್ಟಮ್ಮ, ಪುರಸಭೆ ಉಪಾಧ್ಯಕ್ಷ ಅಣ್ಣಯ್ಯಸ್ವಾಮಿ, ಗ್ರಾಪಂ ಸದಸ್ಯ ವೃಷಭೇಂದ್ರ, ನಿರ್ಮಿತಿ ಕೇಂದ್ರದ ವೃಷಭೇಂದ್ರಪ್ಪ ಸೇರಿದಂತೆ ಹಲವರಿದ್ದರು.