ಮೂಲ್ಕಿ: ಸಾರ್ವಜನಿಕರ ಕುಂದುಕೊರತೆ ಆಲಿಸಿದ ಸಂಸದ ಚೌಟ

| Published : Jan 08 2025, 12:17 AM IST

ಸಾರಾಂಶ

ಮೂಲ್ಕಿ ತಾಲೂಕಿನ ರಸ್ತೆ ಅಭಿವೃದ್ದಿ, ನೀರಿನ ಸಮಸ್ಯೆ, ಇತರ ಮೂಲಸೌಕರ್ಯ ಅಭಿವೃದ್ದಿ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಸ್ಪಂದಿಸುವಂತೆ ಸ್ಥಳೀಯರು ಮನವಿ ಮಾಡಿದರು. ಈ ಬಗ್ಗೆ ಪರಿಶೀಲಿಸಿದ ಸಂಸದರು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಕ್ಕೆ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಭಾನುವಾರ ಮೂಲ್ಕಿಗೆ ಭೇಟಿ ನೀಡಿ ಸ್ಥಳೀಯ ನಾಗರಿಕರ ಕುಂದು ಕೊರತೆಗಳನ್ನು ಆಲಿಸಿದರು.ಮೂಲ್ಕಿಯ ಹೊಟೇಲ್ ಪುನರೂರುನಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಈ ಸಂದರ್ಭ ಸ್ಥಳೀಯ ನಿವಾಸಿಗಳು ಹಾಗೂ ವಿವಿಧ ನಾಗರಿಕರ ತಂಡವು ಮೂಲ್ಕಿ ರೈಲು ನಿಲ್ದಾಣ ಮೂಲಸೌಕರ್ಯ ಅಭಿವೃದ್ಧಿ ಮತ್ತಿತರ ಸಮಸ್ಯೆಗಳ ಬಗ್ಗೆ ಅಹವಾಲು ಸಲ್ಲಿಸಿದರು. ಮನವಿ ಅಲಿಸಿದ ಕ್ಯಾ. ಚೌಟ ಪ್ರತಿಕ್ರಿಯಿಸಿ, ಮೂಲ್ಕಿ ರೈಲು ನಿಲ್ದಾಣ ಅಭಿವೃದ್ಧಿಗಾಗಿ ಸಕಲ ರೀತಿಯಲ್ಲಿ ಶ್ರಮಿಸುತ್ತೇನೆ. ಆದರೆ ಕೊಂಕಣ ರೈಲ್ವೆಯು ಅನುಭವಿಸುತ್ತಿರುವ ನಷ್ಟದಿಂದಾಗಿ ಕೊಂಕಣ ಮಾರ್ಗದ ಯಾವುದೇ ರೈಲು ನಿಲ್ದಾಣಗಳು ಅಭಿವೃದ್ಧಿಗೊಂಡಿಲ್ಲ. ಹೀಗಾಗಿ ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆಯನ್ನು ವಿಲೀನಗೊಳಿಸಿದರೆ ಈ ಸಮಸ್ಯೆಗೂ ಪರಿಹಾರ ದೊರಕಲಿದೆ. ಈ ನಿಟ್ಟಿನಲ್ಲಿ ವಿಲೀನ ಪ್ರಕ್ರಿಯೆಗೆ ಈಗಾಗಲೇ ಕಾರ್ಯೋನ್ಮುಖನಾಗಿದ್ದೇನೆ ಎಂದು ಭರವಸೆ ನೀಡಿದರು.ಮೂಲ್ಕಿ ತಾಲೂಕಿನ ರಸ್ತೆ ಅಭಿವೃದ್ದಿ, ನೀರಿನ ಸಮಸ್ಯೆ, ಇತರ ಮೂಲಸೌಕರ್ಯ ಅಭಿವೃದ್ದಿ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಸ್ಪಂದಿಸುವಂತೆ ಸ್ಥಳೀಯರು ಮನವಿ ಮಾಡಿದರು. ಈ ಬಗ್ಗೆ ಪರಿಶೀಲಿಸಿದ ಸಂಸದರು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಕ್ಕೆ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.