ಘಟನೆಯ ಸಂಪೂರ್ಣ ವಿವರವನ್ನು ಪಡೆದು ಕುಟುಂಬಕ್ಕೆ ಧೈರ್ಯ ತುಂಬಿ ಧನ ಸಹಾಯದ ಜೊತೆಗೆ ದಿನನಿತ್ಯದ ಅಗತ್ಯ ವಸ್ತುಗಳು, ಹೊದಿಕೆ ಹಾಗೂ ಆಹಾರ ಪದಾರ್ಥಗಳನ್ನು ಒದಗಿಸಿದರು.

ಕನಕಪುರ: ಬೆಂಕಿ ಅವಘಡದಿಂದ ಹಾನಿಗೊಳಗಾಗಿದ್ದ ತಾಲೂಕಿನ ಸಾತನೂರು ಹೋಬಳಿಯ ಬಳೆಬಸಪ್ಪನ ದೊಡ್ಡಿ ಗ್ರಾಮದ ರೈತ ಪರಮಶಿವಯ್ಯ ನವರ ಮನೆಗೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ. ಸಿ.ಎನ್.ಮಂಜುನಾಥ್ ಭೇಟಿ ನೀಡಿ ಸಾಂತ್ವನ ಹೇಳಿದರು. ಘಟನೆಯ ಸಂಪೂರ್ಣ ವಿವರವನ್ನು ಪಡೆದು ಕುಟುಂಬಕ್ಕೆ ಧೈರ್ಯ ತುಂಬಿ ಧನ ಸಹಾಯದ ಜೊತೆಗೆ ದಿನನಿತ್ಯದ ಅಗತ್ಯ ವಸ್ತುಗಳು, ಹೊದಿಕೆ ಹಾಗೂ ಆಹಾರ ಪದಾರ್ಥಗಳನ್ನು ಒದಗಿಸಿದರು. ಈ ವೇಳೆ ಸ್ಥಳದಲ್ಲಿದ್ದ ಕಂದಾಯ ಇಲಾಖೆ, ಬೆಸ್ಕಾಂ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಂದ ಘಟನೆಯ ಕುರಿತು ಸಂಪೂರ್ಣ ಮಾಹಿತಿ ಪಡೆದು, ಸರ್ಕಾರದ ವತಿಯಿಂದ ದೊರೆಯಬಹುದಾದ ಅಗತ್ಯ ನೆರವು ಹಾಗೂ ಪರಿಹಾರವನ್ನು ತ್ವರಿತವಾಗಿ ಒದಗಿಸುವಂತೆ ಸೂಚಿಸಿದರು. ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಚಿನ್ನಸ್ವಾಮಿ, ಬಿಜೆಪಿ ಮುಖಂಡ ಕುಮಾರ, ಜೆಡಿಎಸ್ ಮುಖಂಡ ಕಬ್ಬಾಳೇಗೌಡ, ಕನಕಪುರ ನಗರಸಭೆ ಸದಸ್ಯ ಸ್ಟುಡಿಯೋ ಚಂದ್ರು, ಜೆಡಿಎಸ್ ಮಹಿಳಾ ಅಧ್ಯಕ್ಷೆ ಶ್ರೀಮತಿ ಪವಿತ್ರಾ ಸೇರಿ ಹಲವು ಮುಖಂಡರು ಹಾಗೂ ಸ್ಥಳೀಯರು ಈ ವೇಳೆ ಉಪಸ್ಥಿತರಿದ್ದರು.