ಆಪರೇಷನ್ ಸಿಂದೂರ ಸಮಯದಲ್ಲಿ ಭಾರತದ ಶೌರ್ಯ, ದೇಶದಲ್ಲಿ ರೈತರು ನಡೆಸುತ್ತಿರುವ ಜೇನುಕೃಷಿ, ಚಾಂಪಿಯನ್ಸ್ ಟ್ರೋಫಿ ಮತ್ತು ವಿಶ್ವಕಪ್‌ನಲ್ಲಿ ಜಯಗಳಿಸಿದ ಭಾರತದ ಪುರುಷ ಮತ್ತು ಮಹಿಳಾ ಕ್ರಿಕೆಟ್ ತಂಡ, ಟಿ- ಟ್ವೆಂಟಿ ವಿಶ್ವಕಪ್ ಗೆದ್ದ ಅಂಧ ಮಹಿಳಾ ತಂಡ, ವಿಶ್ವ ಚಾಂಪಿಯನ್‌ಶಿಪ್ ನಲ್ಲಿ ಹಲವು ಪದಕ ಗೆದ್ದ ಪ್ಯಾರಾ ಅಥ್ಲಿಟ್ ಗಳ ಸಾಧನೆಯನ್ನು ಪ್ರಧಾನಿ ಮೋದಿ ಶ್ಲಾಘಿಸಿರುವುದಾಗಿ ತಿಳಿಸಿದರು.
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಪ್ರಧಾನಿ ನರೇಂದ್ರ ಮೋದಿಯವರ 129ನೇ ಮನ್ ಕಿ ಬಾತ್ ಕಾರ್ಯಕ್ರಮವನ್ನು ನಗರ ಹೊರವಲಯದ ಅಗಲಗುರ್ಕಿ ಗ್ರಾಮದಲ್ಲಿ ಗ್ರಾಮಸ್ಥರು, ರೈತಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಂಸದ ಡಾ.ಕೆ.ಸುಧಾಕರ್ ಭಾನುವಾರ ವೀಕ್ಷಿಸಿದರು.ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಆಪರೇಷನ್ ಸಿಂದೂರ ಸಮಯದಲ್ಲಿ ಭಾರತದ ಶೌರ್ಯ,
ದೇಶದಲ್ಲಿ ರೈತರು ನಡೆಸುತ್ತಿರುವ ಜೇನುಕೃಷಿ, ಚಾಂಪಿಯನ್ಸ್ ಟ್ರೋಫಿ ಮತ್ತು ವಿಶ್ವಕಪ್‌ನಲ್ಲಿ ಜಯಗಳಿಸಿದ ಭಾರತದ ಪುರುಷ ಮತ್ತು ಮಹಿಳಾ ಕ್ರಿಕೆಟ್ ತಂಡ, ಟಿ- ಟ್ವೆಂಟಿ ವಿಶ್ವಕಪ್ ಗೆದ್ದ ಅಂಧ ಮಹಿಳಾ ತಂಡ, ವಿಶ್ವ ಚಾಂಪಿಯನ್‌ಶಿಪ್ ನಲ್ಲಿ ಹಲವು ಪದಕ ಗೆದ್ದ ಪ್ಯಾರಾ ಅಥ್ಲಿಟ್ ಗಳ ಸಾಧನೆಯನ್ನು ಪ್ರಧಾನಿ ಮೋದಿ ಶ್ಲಾಘಿಸಿರುವುದಾಗಿ ತಿಳಿಸಿದರು.ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪಿದ ಶುಭಾಂಶು ಶುಕ್ಲಾ ಸಾಧನೆ, ಮಹಾಕುಂಭ ಮೇಳ, ರಾಮ ಮಂದಿರ ಧ್ವಜಾರೋಹಣವನ್ನು ಪ್ರಧಾನಿ ಮೋದಿ ಉಲ್ಲೇಖಿಸಿರುವುದಾಗಿ ಹೇಳಿದರು.
ಮಾಜಿ ಶಾಸಕ ಎಂ.ರಾಜಣ್ಣ, ಮುಖಂಡರಾದ ಮರಳಕುಂಟೆ ಕೃಷ್ಣಮೂರ್ತಿ, ನಂದಿ ಶ್ರೀನಿವಾಸ್, ಚಿಕ್ಕಕಾಡಿಗೇನಹಳ್ಳಿ ಕೃಷ್ಣಮೂರ್ತಿ, ಅಗಲಗುರ್ಕಿ ಚಂದ್ರಶೇಖರ್, ರಾಮಾಂಜಿ,ನಾಗೇಶ್, ಗ್ರಾಮಸ್ಥರು, ರೈತಮುಖಂಡರು, ಮುಖಂಡರು, ಕಾರ್ಯಕರ್ತರು ಇದ್ದರು.