ಮಠಾಧೀಶರ ಆಶೀರ್ವಾದ ಪಡೆದ ಸಂಸದ ಜಿ.ಎಂ.ಸಿದ್ದೇಶ್ವರ್

| Published : Apr 28 2024, 01:19 AM IST

ಮಠಾಧೀಶರ ಆಶೀರ್ವಾದ ಪಡೆದ ಸಂಸದ ಜಿ.ಎಂ.ಸಿದ್ದೇಶ್ವರ್
Share this Article
  • FB
  • TW
  • Linkdin
  • Email

ಸಾರಾಂಶ

ದಾವಣಗೆರೆ ಸಂಸದ ಡಾ.ಜಿ.ಎಂ.ಸಿದ್ದೇಶ್ವರ್ ಚಿತ್ರದುರ್ಗದಲ್ಲಿ ವಿವಿಧ ಮಠಾಧೀಶರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ದಾವಣಗೆರೆ: ದಾವಣಗೆರೆ ಸಂಸದ ಡಾ.ಜಿ.ಎಂ.ಸಿದ್ದೇಶ್ವರ್ ಚಿತ್ರದುರ್ಗದ ಭೋವಿ ಗುರುಪೀಠದಲ್ಲಿ ವಿವಿಧ ಮಠಾಧೀಶರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಶ್ರೀ ಶಾಂತವೀರ ಸ್ವಾಮೀಜಿ, ಉಪ್ಪಾರ ಭಗೀರಥ ಗುರುಪೀಠದ ಶ್ರೀ ಪುರುಶೋತ್ತಮಾನಂದಪುರಿ ಸ್ವಾಮೀಜಿ, ವಿಜಯಪುರ ಜಿಲ್ಲೆ, ತಂಗಡಗಿ ಹಡಪದ ಅಪ್ಪಣ್ಣ ಗುರುಪೀಠದ ಅನ್ನಭಾರತಿ ಅಪ್ಪಣ್ಣ ಸ್ವಾಮೀಜಿ, ಕನಕ ಗುರುಪೀಠ ಹೊಸದುರ್ಗ ಶಾಖಾ ಮಠದ ಶ್ರೀ ಈಶ್ವರಾನಂದ ಪುರಿ ಸ್ವಾಮೀಜಿ, ಶಿವಮೊಗ್ಗ ಈಡಿಗರ ಮಠದ ಶ್ರೀ ರೇಣುಕಾನಂದ ಸ್ವಾಮೀಜಿ, ಚಿತ್ರದುರ್ಗ ಮಡಿವಾಳ ಗುರುಪೀಠದ ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಯಾದವ ಗುರುಪೀಠದ ಶ್ರೀ ಕೃಷ್ಣ ಯಾದವಾನಂದ ಸ್ವಾಮೀಜಿ, ಬೆಳಗಾವಿ ಜಿಲ್ಲೆಯ ಕುಂಬಾರ ಗುಂಡಯ್ಯ ಮಠದ ಶ್ರೀ ಕುಂಬಾರ ಗುಂಡಯ್ಯ ಸ್ವಾಮೀಜಿ, ಕೊರಟಗೆರೆ ಅನ್ನಪೂರ್ಣೇಶ್ವರಿ ಮಠದ ಶ್ರೀ ಮಹಾಲಿಂಗ ಸ್ವಾಮೀಜಿ, ರಾಯಚೂರು ಜಿಲ್ಲೆ ಇರಕಲ್ ಶಿವಶಕ್ತಿ ಮಠದ ಶ್ರೀ ಬಸವ ಪ್ರಸಾದ ಶರಣ ಸ್ವಾಮೀಜಿ ಅವರನ್ನು ಭೇಟಿಯಾಗಿ ಗೌರವ ಸಲ್ಲಿಸಿ ಆಶೀರ್ವಾದ ಪಡೆದರು.

ಮಾಜಿ ಸಚಿವ ಮುರುಗೇಶ್ ನಿರಾಣಿ ಇತರರು ಇದ್ದರು.