ಸಾರಾಂಶ
ಕಳೆದ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಬಾಗಲಕೋಟೆಯ ಕುಮಾರೇಶ್ವರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದ ವಿಜಯಪುರ ಸಂಸದ ರಮೇಶ ಜಿಗಜಿಣಗಿ ಶನಿವಾರ ರಾತ್ರಿ ಮತ್ತೆ ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕನ್ನಡಪ್ರಭ ವಾರ್ತೆ ವಿಜಯಪುರ ಕಳೆದ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಬಾಗಲಕೋಟೆಯ ಕುಮಾರೇಶ್ವರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದ ವಿಜಯಪುರ ಸಂಸದ ರಮೇಶ ಜಿಗಜಿಣಗಿ ಶನಿವಾರ ರಾತ್ರಿ ಮತ್ತೆ ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಶನಿವಾರ ಬೆಳಗಾವಿಗೆ ತೆರಳಿದ್ದರು. ಈ ವೇಳೆ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾದ ಕಾರಣ ಕೆಎಲ್ಇ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ರಮೇಶ ಜಿಗಜಿಣಗಿ ಪುತ್ರ ವಿನೋದ್ ಮಾಹಿತಿ ನೀಡಿದ್ದಾರೆ.ಕಳೆದ ಎರಡು ದಿನಗಳ ಹಿಂದಷ್ಟೆ ತಂದೆಯವರ ಹಿರಿಯ ಸಹೋದರಿ ರಾಧಾಬಾಯಿ(97) ಮೃತಪಟ್ಟಿದ್ದರು. ಹಿರಿಯ ಸಹೋದರಿಯನ್ನು ಬಹಳ ಹಚ್ಚಿಕೊಂಡಿದ್ದ ಜಿಗಜಿಣಗಿ ಇದೀಗ ಅಸ್ವಸ್ಥರಾಗಿದ್ದಾರೆ. ಮೆದುಳಿನಲ್ಲಿ ಸ್ವಲ್ಪ ರಕ್ತ ಹೆಪ್ಪುಗಟ್ಟಿದ್ದು, ಸಣ್ಣ ರಂಧ್ರದ ಮೂಲಕ ಹೆಪ್ಪುಗಟ್ಟಿದ ರಕ್ತವನ್ನು ಹೊರ ತೆಗೆಯಲಾಗಿದೆ. ಸಂಸದ ರಮೇಶ ಜಿಗಜಿಣಗಿ ಅವರ ಆರೋಗ್ಯ ಸ್ಥಿರವಾಗಿದೆ, ಯಾರೂ ಆತಂಕ ಪಡಬೇಕಿಲ್ಲ ಎಂದು ಪುತ್ರ ವಿನೋದ್ ತಿಳಿಸಿದ್ದಾರೆ.