ಅಭಿವೃದ್ಧಿ ಕಾಮಗಾರಿಗಳ ಮಾಹಿತಿ ಪಡೆದ ಸಂಸದ ಜಗದೀಶ ಶೆಟ್ಟರ್‌

| Published : Oct 31 2024, 12:49 AM IST

ಅಭಿವೃದ್ಧಿ ಕಾಮಗಾರಿಗಳ ಮಾಹಿತಿ ಪಡೆದ ಸಂಸದ ಜಗದೀಶ ಶೆಟ್ಟರ್‌
Share this Article
  • FB
  • TW
  • Linkdin
  • Email

ಸಾರಾಂಶ

ಸಂಸದ ಜಗದೀಶ ಶೆಟ್ಟರ್ ಹಾಗೂ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಉಪಸ್ಥಿತಿಯಲ್ಲಿ ರೈಲ್ವೆ, ಏರ್‌ಫೋರ್ಟ್‌ , ಬೆಳಗಾವಿ ರಿಂಗ್ ರಸ್ತೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಬಂಧಿಸಿದಂತೆ ಆಯಾ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಯ ಸಭಾಭವನದಲ್ಲಿ ಸಭೆ ನಡೆಸಿ, ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಕುರಿತಾಗಿ ಮಾಹಿತಿ ಪಡೆದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಬೆಳಗಾವಿ-ಕಿತ್ತೂರು-ಧಾರವಾಡ ನೂತನ ರೈಲ್ವೆ ಮಾರ್ಗ ನಿರ್ಮಾಣದ ಭೂಸ್ವಾಧೀನ ಪ್ರಕ್ರಿಯೆ, ನಗರದಲ್ಲಿ ನಿರ್ಮಿಸುತ್ತಿರುವ ರಸ್ತೆ ಮೇಲ್ಸೇತುವೆ ಕಾಮಗಾರಿ ಹಾಗೂ ತಾನಾಜಿ ಗಲ್ಲಿಯ ಹತ್ತಿರ ಮೇಲ್ಸೇತುವೆ ಇಲ್ಲದ್ದರಿಂದ ಆಗಬಹುದಾದ ಅನುಕೂಲತೆಗಳ ಕುರಿತು ಚರ್ಚಿಸಲಾಯಿತು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ರಿಂಗ್ ರಸ್ತೆ ನಿರ್ಮಾಣ ಅಂಗವಾಗಿ ಝಲಸಾಪುರ -ಬಲಗಾ ಮಾರ್ಗದ ಭೂಸ್ವಾಧೀನ ಪ್ರಗತಿಯ ಕುರಿತು ಚರ್ಚಿಸಿ ನಿರ್ದಿಷ್ಟ ಕಾಲಮಿತಿಯಲ್ಲಿ ಪ್ರಕ್ರಿಯೆ ಮುಗಿಸುವಂತೆ ತಿಳಿಸಲಾಯಿತು. ಬೆಳಗಾವಿ (ಶಿಗುಣಸಿ) -ಹುನಗುಂದ-ರಾಯಚೂರು ರಾಷ್ಟ್ರೀಯ ಹೆದ್ದಾರಿ ಕುರಿತಾಗಿಯೂ ಮಾಹಿತಿ ಪಡೆಯಲಾಯಿತು.

ಬೆಳಗಾವಿ ಏರ್‌ಪೋರ್ಟ್ ಅಭಿವೃದ್ಧಿ ಕುರಿತು ಚರ್ಚಿಸಲಾಯಿತು. ಅಲ್ಲಿ ಅವಶ್ಯವಿರುವ ಮೂಲ ಸೌಕರ್ಯಗಳ ಬಗ್ಗೆ ಮಾಹಿತಿ ಪಡೆಯಲಾಯಿತು. ಕಿತ್ತೂರಲ್ಲಿ ಭೂಸ್ವಾಧೀನ ಪ್ರಕ್ರಿಯೆ ತಡವಾಗುತ್ತಿರುವ ಬಗ್ಗೆ ಕೈಗಾರಿಕಾ ಅಭಿವೃದ್ಧಿ ಪ್ರಾಧಿಕಾರ ಅಧಿಕಾರಿಗಳೊಂದಿಗೆ ಚರ್ಚಿಲಾಯಿತು. ಈ ಎಲ್ಲ ಕಾಮಗಾರಿಗಳ ಕುರಿತು ಅಗತ್ಯ ಕ್ರಮ ಕೈಗೊಳ್ಳಲು ಕೆಎಐಡಿಬಿ ಅಧಿಕಾರಿಗಳಿಗೆ ಸೂಚಿಸಲಾಯಿತು.