ವಿಮಾ ಕಂಪೆನಿಯು ವಿಳಂಬ ನೀತಿ ವಿರುದ್ಧ ಕ್ರಮಕ್ಕೆ ಸಂಸದ ಕಾಗೇರಿ ಆಗ್ರಹ

| Published : Jan 19 2025, 02:16 AM IST

ವಿಮಾ ಕಂಪೆನಿಯು ವಿಳಂಬ ನೀತಿ ವಿರುದ್ಧ ಕ್ರಮಕ್ಕೆ ಸಂಸದ ಕಾಗೇರಿ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಬೆಳೆ ವಿಮಾ ಜಮಾ ಮಾಡಲು ಸೂಕ್ತ ಕ್ರಮ ತೆಗೆದುಕೊಂಡು ಹಣ ಬಿಡುಗಡೆಗೊಳಿಸಲು ಸಂಬಂಧಪಟ್ಟ ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಕೇಂದ್ರ ಕೃಷಿವರ ಬಳಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ವಿನಂತಿಸಿದ್ದಾರೆ.

ಶಿರಸಿ: ಹವಾಮಾನ ಆಧಾರಿತ ಬೆಳೆ ವಿಮೆ ಉತ್ತರಕನ್ನಡ ಜಿಲ್ಲೆಯ ರೈತರಿಗೆ ಜಮಾ ಆಗದೇ ಈಗಾಗಲೇ ನಾಲ್ಕರಿಂದ ಐದು ತಿಂಗಳು ಕಳೆದಿದೆ. ವಿಮಾ ಕಂಪೆನಿಯು ವಿಳಂಬ ನೀತಿ ಅನುಸರಿಸುತ್ತಿದ್ದು, ಇದರ ಬಗ್ಗೆ ಕೂಡಲೇ ಸೂಕ್ತ ಕ್ರಮ ತೆಗೆದುಕೊಂಡು ಹಣ ಬಿಡುಗಡೆಗೊಳಿಸಲು ಸಂಬಂಧಪಟ್ಟ ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಬಳಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ವಿನಂತಿಸಿದ್ದಾರೆ.ಸಾಗರದಲ್ಲಿ ಸಾಗರ ಪ್ರಾಂತ್ಯ ಅಡಕೆ ಬೆಳೆಗಾರರ ಸಂಘ ಹಾಗೂ ಆಪ್ಸ್ಕೊಸ್, ತೋಟಗಾರ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಹಯೋಗದಲ್ಲಿ ನಡೆದ ಅಡಕೆ ಬೆಳೆಗಾರರ ಬೃಹತ್ ಸಮಾವೇಶದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಬಳಿ ವಿನಂತಿಸಿದ ಸಂಸದರು, ಜಿಲ್ಲೆಯ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಿಗೆ ರೈತರಿಗೆ ಕಾಡುತ್ತಿರುವ ಸಮಸ್ಯೆಗಳ ಬಗ್ಗೆ ಸಂಪೂರ್ಣ ವಿವರಗಳನ್ನು ತಿಳಿಸಿದರು.

ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ಉಳಿದೆಲ್ಲ ಜಿಲ್ಲೆಯ ರೈತರಿಗೆ ಲಭಿಸಿದೆ. ಉತ್ತರಕನ್ನಡ ರೈತರಿಗೆ ಮಾತ್ರ ಇನ್ನೂ ಲಭಿಸಿಲ್ಲ. ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ವಿನಂತಿಸಿದ್ದಾರೆ.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಸ್ಥಳದಲ್ಲಿಯೇ ಅಧಿಕಾರಿಗಳಿಗೆ ತಕ್ಷಣ ವಿಮೆ ಬಿಡುಗಡೆಗೊಳಿಸಲು ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.