ಸಾರಾಂಶ
ಶಿರಸಿ: ನವದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಅವರ ಕಚೇರಿಯಲ್ಲಿ ಭೇಟಿಯಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಾರವಾರದ ಸೀಬರ್ಡ್ ನೌಕಾನೆಲೆಯಿಂದ ಉಂಟಾಗಿರುವ ಸಮಸ್ಯೆಯ ಕುರಿತು ಚರ್ಚಿಸಿದರು. ಬಾಕಿ ಇರುವ ಭೂ ಪರಿಹಾರವನ್ನು ತಕ್ಷಣವೇ ನೀಡುವಂತೆ ಹಾಗೂ ಬಾಕಿ ಇರುವ ನಾನಾ ಸಮಸ್ಯೆಗಳ ಕಡತಗಳನ್ನು ಅತಿ ಶೀಘ್ರದಲ್ಲಿ ವಿಲೇವಾರಿ ಮಾಡುವಂತೆ ಮನವರಿಕೆ ಮಾಡಿದರು. ನೌಕಾನೆಲೆಗಾಗಿ ಭೂಮಿ ಕಳೆದುಕೊಂಡವರಿಗೆ ಹಾಗೂ ಸ್ಥಳೀಯರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು ಮತ್ತು ಸಿಬರ್ಡ್ ನೌಕನೆಲೆಯಲ್ಲಿ ನಡೆಯುವ ಉದ್ಯೋಗ ಪರೀಕ್ಷಾ ಕೇಂದ್ರವನ್ನು ಕಾರವಾರದಲ್ಲಿಯೇ ಸ್ಥಾಪಿಸಬೇಕೆಂದು ಮನವಿ ಸಲ್ಲಿಸಿ, ಸುದೀರ್ಘ ಚರ್ಚೆ ನಡೆಸಿದರು. ಇದಕ್ಕೆ ರಾಜನಾಥ್ ಸಿಂಗ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ ಸ್ಪಂದಿಸುವಂತೆ ನಿರ್ದೇಶನ ನೀಡಿ, ಮುಂದಿನ ದಿನಗಳಲ್ಲಿ ಸಮಸ್ಯೆಯುಂಟಾದಲ್ಲಿ ತುರ್ತುಗತಿಯಲ್ಲಿ ಇತ್ಯರ್ಥ ಮಾಡುವುದಾಗಿ ಭರವಸೆ ನೀಡಿದರು. ಮುಷ್ಕರ ಮುಂದುವರಿಸಲು ಅವಕಾಶ ನೀಡುವಂತೆ ಮನವಿ
ಕಾರವಾರ: ಜಿಲ್ಲೆಯ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಜೀವಿನಿ ಮುಖ್ಯ ಪುಸ್ತಕದ ಬರಹಗಾರರು(ಎಂಬಿಕೆ) ಹಾಗೂ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ(ಎಲ್‌ಸಿಆರ್‌ಪಿ) ಸಿಬ್ಬಂದಿಗೆ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಮುಂದುವರಿಯಲು ಅನುವು ಮಾಡಿಕೊಡುವಂತೆ ಆಗ್ರಹಿಸಿ ಮಂಗಳವಾರ ಎಂಬಿಕೆ ಮತ್ತು ಎಲ್‌ಸಿಆರ್‌ಪಿ ಸಿಬ್ಬಂದಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರಕುಮಾರ ಕಾಂದೂ ಅವರಿಗೆ ಮನವಿ ನೀಡಿದರು.
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನ. 11ರಿಂದ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಮಟ್ಟದ ಎಂಬಿಕೆ ಹಾಗೂ ಎಲ್‌ಸಿಆರ್‌ಪಿ ಸಿಬ್ಬಂದಿ ಪ್ರತಿಭಟನೆ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಕೌಶಲ್ಯಾಭಿವೃದ್ಧಿ ಇಲಾಖೆಯ ಸಚಿವರು ಮನವಿ ಸ್ವೀಕರಿಸಿ ನ. 25 ಅಥವಾ 26ರಂದು ವಿಶೇಷ ಸಭೆ ಏರ್ಪಡಿಸಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ. ನಂತರ ಷರತ್ತಿನ ಆಧಾರದಲ್ಲಿ ಹೋರಾಟವನ್ನು ಹಿಂದಕ್ಕೆ ಪಡೆಯಲಾಯಿತು. ಆದರೆ ಈವರೆಗೆ ಸಭೆ ಕರೆಯದ ಕಾರಣ ಸಭೆ ನಡೆಯುವ ವರೆಗೂ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವುದಿಲ್ಲ. ಇದಕ್ಕೆ ಅನುಮತಿ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.ಮನವಿ ಸ್ಬೀಕರಿಸಿದ ಜಿಪಂ ಸಿಇಒ ಈಶ್ವರ ಕುಮಾರ ಕಾಂದೂ, ಜಿಲ್ಲೆಗಳಲ್ಲಿ ಸಿಬ್ಬಂದಿಯು ನೀಡಿದ ಮನವಿಯ ಬಗ್ಗೆ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡುತ್ತೇನೆ. ಬಳಿಕ ಸಭೆ ಕರೆದು ಸಮಸ್ಯೆಯನ್ನು ಬಗೆಹರಿಸಲಾಗುತ್ತದೆ ಎಂದು ಭರವಸೆ ನೀಡಿದರು.