ರಾಮನಗರ: ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ನವ ಕರ್ನಾಟಕ ಎಂ.ಆರ್.ಡಬ್ಲ್ಯೂ, ವಿ.ಆರ್.ಡಬ್ಲ್ಯೂ, ಯು.ಆರ್.ಡಬ್ಲ್ಯೂ, ವಿಕಲಚೇತನರ ಗೌರವಧನ ಕಾರ್ಯಕರ್ತರ ಸಂಘದ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ವಿಶೇಷ ಚೇತನರನ್ನು ಸಂಸದ ಡಾ. ಸಿ.ಎನ್.ಮಂಜುನಾಥ್ ಭೇಟಿ ಮಾಡಿ ಅಹವಾಲು ಆಲಿಸಿದರು
ರಾಮನಗರ: ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ನವ ಕರ್ನಾಟಕ ಎಂ.ಆರ್.ಡಬ್ಲ್ಯೂ, ವಿ.ಆರ್.ಡಬ್ಲ್ಯೂ, ಯು.ಆರ್.ಡಬ್ಲ್ಯೂ, ವಿಕಲಚೇತನರ ಗೌರವಧನ ಕಾರ್ಯಕರ್ತರ ಸಂಘದ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ವಿಶೇಷ ಚೇತನರನ್ನು ಸಂಸದ ಡಾ. ಸಿ.ಎನ್.ಮಂಜುನಾಥ್ ಭೇಟಿ ಮಾಡಿ ಅಹವಾಲು ಆಲಿಸಿದರು.
ಎಂಆರ್‌ಡಬ್ಲ್ಯೂ, ವಿಆರ್‌ಡಬ್ಲ್ಯೂ, ಯುಆರ್‌ಡಬ್ಲ್ಯೂ ವಿಕಲಚೇತನ ಕಾರ್ಯಕರ್ತರ ಸುಮಾರು 19 ವರ್ಷಗಳ ಸೇವೆಯನ್ನು ಪರಿಗಣಿಸಿ, ಉನ್ನತ ಮಟ್ಟದ ಸಮಿತಿ ರಚಿಸಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಸೇವೆಯನ್ನು ಕಾಯಂಗೊಳಿಸುವ ಕುರಿತು ಸೂಕ್ತ ಕ್ರಮ ಕೈಗೊಂಡು ಅಧಿಕೃತ ಆದೇಶ ಪತ್ರ ಹೊರಡಿಸಬೇಕು. ಸ್ಥಗಿತಗೊಂಡಿರುವ ಮಾಸಾಶನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸುತ್ತಿದ್ದೇವೆ ಎಂದು ವಿಶೇಷಚೇತನರು ಸಂಸದ ಮಂಜುನಾಥ್ ಅವರಿಗೆ ವಿವರಿಸಿದರು.ಸರ್ಕಾರ ನಮ್ಮ ಮನವಿ ಆಲಿಸಿಲ್ಲ. ಉಸ್ತುವಾರಿ ಸಚಿವರು, ಶಾಸಕರು ಬಂದು ಹೋದರು, ಬೇಡಿಕೆಗಳು ಈಡೇರಿಲ್ಲ. ಇಂದಲ್ಲ ನಾಳೆ ಸರ್ಕಾರ ನಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುತ್ತಾರೆ ಎಂಬ ಆಶಾಭಾವನೆಯಿಂದ ಇಲ್ಲಿಯವರೆಗೂ ಬಂದಿದ್ದೇವೆ. ನಾವು ಬದುಕಿದ್ದು ಸತ್ತಂತೆ ಬಾಳುತ್ತಿದ್ದೇವೆ. ತಾವು ಸರ್ಕಾರದ ಮೇಲೆ ಒತ್ತಡ ತಂದು ಕೇಂದ್ರ ಸರ್ಕಾರದಿಂದಲೂ ನಮಗೆ ಸಹಾಯ ಮಾಡಿಸಲು ಕ್ರಮ ಕೈಗೊಳ್ಳಬೇಕು ಎಂಬ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ಡಾ. ಮಂಜುನಾಥ್ , ನಾನೇ ಖುದ್ದಾಗಿ ಸರ್ಕಾರದ ಮುಖ್ಯಕಾರ್ಯದರ್ಶಿಗಳು, ಸಾರಿಗೆ ಸಚಿವರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರೊಂದಿಗೆ ಮಾತನಾಡುತ್ತೇನೆ. ಮುಖ್ಯಮಂತ್ರಿಗಳಿಗೂ ಪತ್ರ ಬರೆಯುತ್ತೇನೆ. ಕೇಂದ್ರ ಸರ್ಕಾರದಿಂದ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಕಾಳಯ್ಯ, ನಗರ ಅಧ್ಯಕ್ಷ ಚಂದನ್ ಮೋರೆ, ಮುಖಂಡರಾದ ಹೋಟೆಲ್ ಉಮೇಶ್, ದರ್ಶನ್ ರೆಡ್ಡಿ, ರಾಮಕೃಷ್ಣಯ್ಯ, ಚನ್ನಪ್ಪ, ಪ್ರಶಾಂತ್, ಮೋಹನ್ , ಸಂಘಟನೆಯ ಮಂಜುನಾಥ್, ಕೆ. ಅನಿಲ್, ಅಭಿ, ರಾಮನಗರ ಜಿಲ್ಲಾಧ್ಯಕ್ಷ ಶಬರೀಶ್, ಯಶೋಧ, ಬೋರೇಗೌಡ, ನಾಗರಾಜ್ ಮತ್ತಿತರರು ಹಾಜರಿದ್ದರು.
30ಕೆಆರ್ ಎಂಎನ್ 5.ಜೆಪಿಜಿಸಂಸದ ಡಾ.ಸಿ.ಎನ್.ಮಂಜುನಾಥ್ ವಿಶೇಷ ಚೇತನರನ್ನು ಭೇಟಿಯಾಗಿ ಅಹವಾಲು ಆಲಿಸಿದರು.