ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಪ್ರಗತಿಯಲ್ಲಿರುವ ಅಂಡರ್ ಪಾಸ್ ಹಾಗೂ ಸ್ಕೈ ವಾಕ್ ನಿರ್ಮಾಣ ಕಾಮಗಾರಿಗಳನ್ನು ಸಂಸದ ಡಾ.ಸಿ.ಎನ್.ಮಂಜುನಾಥ್ ಮಂಗಳವಾರ ವೀಕ್ಷಣೆ ಮಾಡಿದರು.
ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಪ್ರಗತಿಯಲ್ಲಿರುವ ಅಂಡರ್ ಪಾಸ್ ಹಾಗೂ ಸ್ಕೈ ವಾಕ್ ನಿರ್ಮಾಣ ಕಾಮಗಾರಿಗಳನ್ನು ಸಂಸದ ಡಾ.ಸಿ.ಎನ್.ಮಂಜುನಾಥ್ ಮಂಗಳವಾರ ವೀಕ್ಷಣೆ ಮಾಡಿದರು.
ಎಕ್ಸ್ ಪ್ರೆಸ್ ವೇ ಪ್ರಾರಂಭವಾಗುವ ಪಂಚಮುಖಿ ಗಣಪತಿ ಜಂಕ್ಷನ್ ಗೆ ಭೇಟಿ ನೀಡಿದ ಸಂಸದ ಮಂಜುನಾಥ್ ಅವರು ಸಂಚಾರ ದಟ್ಟಣೆ ಸುಧಾರಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಚರ್ಚಿಸಿ ಕೆಲವೊಂದು ಸೂಚನೆಗಳನ್ನು ನೀಡಿದರು.ಶೇಷಗಿರಿಹಳ್ಳಿ ಗ್ರಾಮದ ಬಳಿ ನಿರ್ಮಾಣ ಹಂತದಲ್ಲಿರುವ ಅಂಡರ್‌ಪಾಸ್ ಕಾರ್ಯವನ್ನು ಪರಿಶೀಲಿಸಿದ ಸಂಸದರು, ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸುವಂತೆ ತಿಳಿಸಿದರು. ಅಲ್ಲಿಂದ ಮಂಚನಾಯಕನಹಳ್ಳಿ / ಲಕ್ಷ್ಮೀಸಾಗರ ಗೇಟ್ ಬಳಿ ಪಾದಚಾರಿಗಳ ಸುರಕ್ಷತೆಗೆ ಸ್ಕೈ ವಾಕ್ ನಿರ್ಮಾಣ ಮಾಡುವ ಜಾಗವನ್ನು ವೀಕ್ಷಿಸಿದರು.
ಅಲ್ಲಿಂದ ಸರ್ವಿಸ್ ರಸ್ತೆಯಲ್ಲಿ ಬಿಡದಿ ಪಟ್ಟಣಕ್ಕೆ ಆಗಮಿಸಿದ ಸಂಸದ ಮಂಜುನಾಥ್ ಬಿಡದಿ ಪ್ರಯಾಣಿಕರ ತಂಗುದಾಣದಲ್ಲಿ ಸಾರ್ವಜನಿಕರಿಗೆ ಎದುರಾಗುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಕೆಎಸ್ಆರ್‌ಟಿಸಿ ಹಾಗೂ ಬಿಎಂಟಿಸಿ ಅಧಿಕಾರಿಗಳು ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.ಮಾದಾಪುರ ಗೇಟ್ ಬಳಿ ಸ್ಕೈ ವಾಕ್ ನಿರ್ಮಾಣದ ವಿಚಾರವಾಗಿ ಚರ್ಚಿಸಿದ ಸಂಸದರು, ಸಾರ್ವಜನಿಕ ಹಿತದೃಷ್ಟಿಯಿಂದ ತ್ವರಿತ ಹಾಗೂ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನಗಳನ್ನು ನೀಡಿದರು.
ಟಾಯ್ಸ್ ಪಾರ್ಕ್ ಗೆ ಸ್ಥಳ ಪರಿಶೀಲನೆ:ಚನ್ನಪಟ್ಟಣದಲ್ಲಿ ಟಾಯ್ಸ್ ಪಾರ್ಕ್ ಸ್ಥಾಪನೆ ಸಂಬಂಧ ಮಹತ್ವದ ಹೆಜ್ಜೆ ಇಟ್ಟಿರುವ ಸಂಸದ ಡಾ. ಸಿ.ಎನ್. ಮಂಜುನಾಥ್ ರವರು ಅದಕ್ಕಾಗಿ ಸ್ಥಳ ವೀಕ್ಷಣೆ ಮಾಡಿದರು.
ಬೆಂಗಳೂರು–ಮೈಸೂರು ಹೆದ್ದಾರಿಯ ಚನ್ನಪಟ್ಟಣ ತಾಲ್ಲೂಕಿನ ಕನ್ನಮಂಗಲದೊಡ್ಡಿ ಹಾಗೂ ಕಣ್ವ ಜಂಕ್ಷನ್ ಪ್ರದೇಶಗಳಲ್ಲಿ ಗೊಂಬೆಗಳ ಉದ್ಯಾನವನ (Toys Park) ನಿರ್ಮಾಣಕ್ಕೆ ಸ್ಥಳ ವೀಕ್ಷಣೆ ನಡೆಸಿದರು.ಹತ್ತಿರದ ಪ್ರದೇಶದಲ್ಲಿ ಚನ್ನಪಟ್ಟಣದ ಪರಂಪರೆಯ ಗೊಂಬೆಕಲೆಯನ್ನು ಉತ್ತೇಜಿಸುವ ಸಲುವಾಗಿ ಟಾಯ್ಸ್ ಪಾರ್ಕ್ ಸ್ಥಾಪನೆ ಹಾಗೂ ಪ್ರವಾಸಿಗರು, ಹೆದ್ದಾರಿ ಪ್ರಯಾಣಿಕರಿಗೆ ಅಲ್ಪಾವಧಿ ವಿಶ್ರಾಂತಿ, ಮೂಲಸೌಕರ್ಯ ಮತ್ತು ಅಗತ್ಯ ಸೌಲಭ್ಯಗಳನ್ನು ಒದಗಿಸಲು ಸೂಕ್ತ ಸ್ಥಳ ಗುರುತಿಸುವ ಕುರಿತು ಶಾಸಕ ಸಿ.ಪಿ.ಯೋಗೇಶ್ವರ್ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾಜೆಕ್ಟ್ ಡೈರೆಕ್ಟರ್ ಮಿಲನ್ ಕುಮಾರ್ , ಜೆಡಿಎಸ್ ಜಿಲ್ಲಾಧ್ಯಕ್ಷ ಎ.ಮಂಜುನಾಥ್ , ಬಿಜೆಪಿ ಮುಖಂಡ ಪ್ರಸಾದ್ ಗೌಡ ಮತ್ತಿತರರು ಹಾಜರಿದ್ದರು.6ಕೆಆರ್ ಎಂಎನ್ 4,5.ಜೆಪಿಜಿ
4.ಸಂಸದ ಡಾ.ಸಿ.ಎನ್.ಮಂಜುನಾಥ್ ಸರ್ವಿಸ್ ರಸ್ತೆಯಲ್ಲಿನ ಚರಂಡಿಯನ್ನು ವೀಕ್ಷಣೆ ಮಾಡಿದರು.5.ಸಂಸದ ಡಾ.ಸಿ.ಎನ್ .ಮಂಜುನಾಥ್ ಚನ್ನಪಟ್ಟಣದಲ್ಲಿ ಟಾಯ್ಸ್ ಪಾರ್ಕ್ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸಿದರು.