ಶಿವಮೊಗ್ಗ: ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮದ ಅಂಗವಾಗಿ, ಇಂದು ಸಂಸದ ಬಿ.ವೈ. ರಾಘವೇಂದ್ರ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಬೂತ್ ಮಟ್ಟದ ಅಧಿಕಾರಿಗಳಿಗೆ ಅಗತ್ಯ ದಾಖಲಾತಿಗಳು ಹಾಗೂ ನಿಖರ ವಿವರಗಳನ್ನು ಹಸ್ತಾಂತರಿಸುವ ಮೂಲಕ ನೋಂದಣಿ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಇನ್ನಷ್ಟು ಸದೃಢಗೊಳಿಸುವಲ್ಲಿ ಪ್ರತಿಯೊಂದು ಮತವೂ ಅತ್ಯಂತ ಅಮೂಲ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಅರ್ಹ ನಾಗರಿಕರೆಲ್ಲರೂ ಈ ಮಹತ್ವದ ಪರಿಷ್ಕರಣಾ ಪ್ರಕ್ರಿಯೆಯಲ್ಲಿ ಜವಾಬ್ದಾರಿಯಿಂದ ಕೈಜೋಡಿಸಬೇಕಾಗಿ ವಿನಂತಿಸಿದರು.

ನಿಮ್ಮ ಮನೆ ಬಾಗಿಲಿಗೆ ಆಗಮಿಸುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಹಾಗೂ ದಾಖಲೆಗಳನ್ನು ಒದಗಿಸಿಕೊಡಿ. ಆ ಮೂಲಕ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಮತ್ತು ವೈಯಕ್ತಿಕ ವಿವರಗಳು ಯಾವುದೇ ದೋಷಗಳಿಲ್ಲದೆ, ಸಮರ್ಪಕವಾಗಿ ನಮೂದಾಗಿರುವುದನ್ನು ಖಾತರಿಪಡಿಸಿಕೊಳ್ಳಿ. ಇದು ನಮ್ಮ ಹೆಮ್ಮೆಯ ಹಕ್ಕು ಮಾತ್ರವಲ್ಲ, ಪ್ರತಿಯೊಬ್ಬ ಜವಾಬ್ದಾರಿಯುತ ಪ್ರಜೆಯ ಆದ್ಯ ಕರ್ತವ್ಯವೂ ಹೌದು ಎಂದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಎನ್‌.ಹೇಮಂತ್, ಮುಖ್ಯ ಯೋಜನಾಧಿಕಾರಿ ಹನುಮಂತನಾಯ್ಕ್, ಯೋಜನಾ ನಿರ್ದೇಶಕ ರಂಗಸ್ವಾಮಿ ಸೇರಿದಂತೆ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

-----------

ಪೋಟೋ: 06ಎಸ್‌ಎಂಜಿಕೆಪಿ07