ಸಾರಾಂಶ
MP Prabha Mallikarjun demands promotion of peanut by-products
ಕನ್ನಡಪ್ರಭ ವಾರ್ತೆ ದಾವಣಗೆರೆ
ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯ ಸೇರಿದಂತೆ ವಿವಿಧ ರಾಜ್ಯಗಳ ಅಡಕೆ ಬೆಳೆಗಾರರ ಹಿತದೃಷ್ಟಿಯಲ್ಲಿಟ್ಟುಕೊಂಡು ಅಡಿಕೆ ಆಮದನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಆಗ್ರಹಿಸಿದ್ದಾರೆ.ಈ ಬಗ್ಗೆ ಲೋಕಸಭೆಯಲ್ಲಿಂದು ಪ್ರಶ್ನೋತ್ತರ ವೇಳೆ ಚುಕ್ಕೆ ಇಲ್ಲದ ಪ್ರಶ್ನೆ ಕೇಳಿದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಅಡಿಕೆ ಆಮದಿನಿಂದ ದೇಶದ ಅಡಕೆ ಬೆಳೆಗಾರರಿಗೆ ಸರಿಯಾದ ಬೆಲೆ ಸಿಗದೇ ತೊಂದರೆ ಆಗುತ್ತಿದೆ ಎಂದು ಸದನದ ಗಮನಕ್ಕೆ ತಂದರು.
ಅಡಕೆ ಆಮದು ನಿಷೇಧದ ಜೊತೆಗೆ ಅಡಕೆಯಿಂದ ಮಾಡುವ ಉಪ ಉತ್ಪನ್ನಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕೆಂದು ಆಗ್ರಹಿಸಿದ ಅವರು ಅಡಕೆ ಬೆಳೆಗಾರರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಸೂಕ್ತ ತಿರ್ಮಾನ ತೆಗೆದುಕೊಳ್ಳಬೇಕೆಂದು ಕೇಂದ್ರ ಕೃಷಿ ಮತ್ತು ತೋಟಗಾರಿಕೆ ಸಚಿವರಿಗೆ ಮನವಿ ಮಾಡಿದರು.ಖೇಲೋ ಇಂಡಿಯಾ ಕ್ರೀಡಾಂಗಣಕ್ಕೆ ಒತ್ತಾಯ:ಅದೇ ರೀತಿ ಕೇಂದ್ರ ಕ್ರೀಡಾ ಸಚಿವರಿಗೆ ಖೆಲೋ ಇಂಡಿಯಾ ಯೋಜನೆಯಡಿ ದಾವಣಗೆರೆಯಲ್ಲಿ ಕ್ರೀಡಾಂಗಣ ಅನುಷ್ಠಾನ ಮತ್ತು ಅಭಿವೃದ್ಧಿಯ ಬಗ್ಗೆ ಗಮನ ಸೆಳೆದರು.
........ಕ್ಯಾಪ್ಷನ10ಕೆಡಿವಿಜಿ51 ಡಾ.ಪ್ರಭಾ ಮಲ್ಲಿಕಾರ್ಜುನ