ವಿಐಎಲ್ಎಲ್ ನಿವೃತ್ತ ಕಾರ್ಮಿಕರ ಕೇಂದ್ರಕ್ಕೆ ಸಂಸದ ರಾಘವೇಂದ್ರ ಭೇಟಿ

| Published : Feb 16 2024, 01:46 AM IST

ವಿಐಎಲ್ಎಲ್ ನಿವೃತ್ತ ಕಾರ್ಮಿಕರ ಕೇಂದ್ರಕ್ಕೆ ಸಂಸದ ರಾಘವೇಂದ್ರ ಭೇಟಿ
Share this Article
  • FB
  • TW
  • Linkdin
  • Email

ಸಾರಾಂಶ

ಭದ್ರಾವತಿ ನ್ಯೂಟೌನ್ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರಕ್ಕೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿ ನಿವೃತ್ತ ಕಾರ್ಮಿಕರೊಂದಿಗೆ ಚರ್ಚಿಸಿದರು.

ಕನ್ನಡಪ್ರಭ ವಾರ್ತೆ ಭದ್ರಾವತಿ

ನಗರದ ನ್ಯೂಟೌನ್ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರಕ್ಕೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿ ನಿವೃತ್ತ ಕಾರ್ಮಿಕರೊಂದಿಗೆ ಚರ್ಚಿಸಿದರು.

ವಿಐಎಲ್ಎಲ್ ಕಾರ್ಖಾನೆ ಮುಚ್ಚುವ ಆದೇಶ ಹಿಂಪಡೆದು ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ತೊಡಗಿಸಿ ಅಭಿವೃದ್ಧಿಪಡಿಸುವುದು. ಕಾರ್ಖಾನೆ ವಸತಿಗೃಹಗಳನ್ನು ಪುನಃ ದೀರ್ಘಾವಧಿ ಬಾಡಿಗೆ ಆಧಾರದಲ್ಲಿ ನೀಡುವುದು. 1989 ರಿಂದ 1998ರ ನಡುವೆ ನಿವೃತ್ತಿ ಹೊಂದಿರುವ ಕಾರ್ಮಿಕರಿಗೂ ವೈದ್ಯಕೀಯ ಭತ್ಯೆ ಯೋಜನೆ ಜಾರಿಗೊಳಿಸುವುದು ಸೇರಿ ಇತ್ಯಾದಿ ಬೇಡಿಕೆ ಈಡೇರಿಸುವಂತೆ ಸಂಸದರಿಗೆ ಈ ಸಂದರ್ಭದಲ್ಲಿ ಒತ್ತಾಯಿಸಿ ನಿವೃತ್ತ ಕಾರ್ಮಿಕರು ಮನವಿ ಸಲ್ಲಿಸಿದರು.

ಕಲ್ಯಾಣ ಕೇಂದ್ರ ಅಧ್ಯಕ್ಷ ಬಿ.ಜಿ ರಾಮಲಿಂಗಯ್ಯ, ಪ್ರಮುಖರಾದ ಅಡವೀಶಯ್ಯ, ಮಂಜುನಾಥ್, ಹನುಮಂತ ರಾವ್, ನರಸಿಂಹಾಚಾರ್ ಬಸವರಾಜ್, ಶಂಕರ್, ಗಜೇಂದ್ರ ರಾಮಪ್ಪ ಸೇರಿ ಇನ್ನಿತರರಿದ್ದರು.

ಅಧಿಕಾರಿಗಳೊಂದಿಗೆ ಚರ್ಚೆ:

ವಿಐಎಲ್ಎಲ್ ಅತಿಥಿ ಗೃಹದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಹಾಗು ಮಹಾ ಪ್ರಬಂಧಕ (ಸಿಬ್ಬಂದಿ ಮತ್ತು ಸಾರ್ವಜನಿಕ ಸಂಪರ್ಕ) ಎಲ್. ಪ್ರವೀಣ್ ಕುಮಾರ್ ಅವರೊಂದಿಗೆ ಚರ್ಚಿಸಿದರು.

ಕಾರ್ಖಾನೆ ಅಭಿವೃದ್ಧಿಪಡಿಸುವ ಸಂಬಂಧ ಕೇಂದ್ರ ಸರ್ಕಾರ ಹಾಗೂ ಸಂಬಂಧಪಟ್ಟ ಸಚಿವರು ಮತ್ತು ಉಕ್ಕು ಪ್ರಾಧಿಕಾರದ ಜೊತೆ ನಿರಂತರವಾಗಿ ಸಹಕರಿಸುವಂತೆ ಮನವಿ ಮಾಡಿದರು. ಗುತ್ತಿಗೆ ಕಾರ್ಮಿಕ ಸಂಘದ ಅಧ್ಯಕ್ಷ ಸುರೇಶ್, ಕಾರ್ಯದರ್ಶಿ ರಾಕೇಶ್, ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ಅಧ್ಯಕ್ಷ ಬಿ.ಜಿ ರಾಮಲಿಂಗಯ್ಯ, ಅಡವಿಶಯ್ಯ, ಜಿ. ಧರ್ಮಪ್ರಸಾದ್, ಎಸ್.ಎಸ್ ಜ್ಯೋತಿ ಪ್ರಕಾಶ್ ಸೇರಿ ಇತರರಿದ್ದರು.