ಸಾರಾಂಶ
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಕಾಂಗ್ರೆಸ್ ಸಂಸದ ಧೀರರಾಜ್ ಸಾಹು ಮನೆಯಲ್ಲಿ ಅಕ್ರಮ ಕೋಟ್ಯಂತರ ರು. ಪತ್ತೆಯಾಗಿದೆ. ಈ ಹಿನ್ನೆಲೆ ಕೂಡಲೇ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.ಈ ಪ್ರಕರಣದಿಂದ ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವ ವಿರೋಧಿ, ಲೂಟಿಕೋರ, ಲಂಚಕೋರ ಎಂಬುವುದು ಸಾಬೀತಾಗಿದೆ. ಬೆಂಗಳೂರಿನಲ್ಲಿ ₹40 ಕೋಟಿ, ₹80 ಕೋಟಿ ಈಗ ₹300 ಕೋಟಿಗೂ ಅಧಿಕ ಹಣ ಕಾಂಗ್ರೆಸ್ ಮುಖಂಡರ ಮನೆಯಲ್ಲಿ ಲಭ್ಯವಾಗಿದೆ. ಈ ಮೂಲಕ ಕಾಂಗ್ರೆಸ್‌ನ ಸಾಚಾತನ ಬಟಾಬಯಲಾಗಿದೆ. ಕೂಡಲೇ ಭ್ರಷ್ಟ ಸಾಹು ಆವರು ತಮ್ಮ ಸ್ಥಾನಕ್ಕೆ ರಾಜಿನಾಮೆ ಕೊಡಬೇಕು. ಅಲ್ಲಿಯವರೆಗೆ ತಕ್ಷಣ ಅವರನ್ನು ಐಟಿ ಅಧಿಕಾರಿಗಳು ಬಂಧಿಸಿ, ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಹಲ್ಲೆ ವಿರುದ್ಧ ಕ್ರಮ ಜರುಗಿಸಿ:ಭದ್ರಾವತಿಯ ಬಿಜೆಪಿ ನಾಯಕ ಗೋಕುಲ್ ಮೇಲೆ ಮಾರಣಾಂತಿಕ ಹಲ್ಲೆಯಾಗಿದೆ. ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಸುಮೊಟೋ ಕೇಸ್ ದಾಖಲಿಸಿ ತಪ್ಪಿತಸ್ಥರನ್ನು ಬಂಧಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು. ನಗರದಲ್ಲಿ ಬಿಜೆಪಿ ಸತ್ತಿಲ್ಲ. ಜೀವಂತವಾಗಿದೆ. ಒತ್ತಡಕ್ಕೆ ಮಣಿದು ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸಿದರೆ ಬಿಜೆಪಿ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಲಿದೆ ಎಂದು ಎಚ್ಚರಿಸಿದರು.
ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ನಗರಾಧ್ಯಕ್ಷ ಜಗದೀಶ್ ಪ್ರಮುಖರಾದ ಜ್ಯೋತಿಪ್ರಕಾಶ್, ಸಂತೋಷ್ ಬಳ್ಳಕೆರೆ, ರತ್ನಾಕರ್ ಶೆಣೈ, ಡಾ.ಧನಂಜಯ್ ಸರ್ಜಿ, ವಿನ್ಸೆಂಟ್ ರೋಡ್ರಿಗಸ್, ಈ. ವಿಶ್ವಾಸ್, ಶ್ರೀನಾಥ್, ಮಾಲತೇಶ್, ಸುರೇಖಾ ಮುರಳೀಧರ್, ಸುನೀತಾ ಅಣ್ಣಪ್ಪ, ದರ್ಶನ್ ಮತ್ತಿರರು ಇದ್ದರು.- - -
-11ಎಸ್‌ಎಂಜಿಕೆಪಿ06:ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಕಾಂಗ್ರೆಸ್ ಸಂಸದ ಧೀರರಾಜ್ ಸಾಹು ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು.