ಸಾರಾಂಶ
ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಹಿಂದೂ ವಿರೋಧಿ, ಹನುಮ ವಿರೋಧಿ, ರಾಮನ ವಿರೋಧಿ ಸರ್ಕಾರ ಎಂದು ಧಿಕ್ಕಾರ ಕೂಗಿದರು. ಸಿಎಂ ಸಿದ್ದರಾಮಯ್ಯ ವಿರುದ್ಧವೂ ಘೋಷಣೆ ಕೂಗುವ ಮೂಲಕ ಆಕ್ರೋಶ ಹೊರಹಾಕಲಾಯಿತು.
ಕೊಪ್ಪಳ: ರಾಜ್ಯ ಕಾಂಗ್ರೆಸ್ ಸರ್ಕಾರವು ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಹನುಮ ಧ್ವಜವನ್ನು ಬಲವಂತವಾಗಿ ಇಳಿಸಿ ಗ್ರಾಮಸ್ಥರ ಭಾವನೆಗಳಿಗೆ ನೋವುಂಟು ಮಾಡಿದೆ. ಸರ್ಕಾರ ಪುನಃ ಅಲ್ಲಿ ಹನುಮ ಧ್ವಜ ಏರಿಸಬೇಕು ಎಂದು ಸಂಸದ ಸಂಗಣ್ಣ ಕರಡಿ ಆಗ್ರಹಿಸಿದರು.
ಕೆರಗೋಡಿನಲ್ಲಿ ಹನುಮ ಧ್ವಜ ತೆರವುಗೊಳಿಸಿದ ಹಿನ್ನೆಲೆಯಲ್ಲಿ ನಗರದ ಬಸವೇಶ್ವರ ವೃತ್ತದ ಬಳಿ ಬಿಜೆಪಿ ಹಮ್ಮಿಕೊಂಡ ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಇದು ಖಂಡನೀಯ. ಆ ಸ್ಥಳದಲ್ಲಿ ಮರಳಿ ಹನುಮ ಧ್ವಜ ಏರಿಸಬೇಕು ಎಂದು ಪುನರುಚ್ಚರಿಸಿದರು.ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಹಿಂದೂ ವಿರೋಧಿ, ಹನುಮ ವಿರೋಧಿ, ರಾಮನ ವಿರೋಧಿ ಸರ್ಕಾರ ಎಂದು ಧಿಕ್ಕಾರ ಕೂಗಿದರು. ಸಿಎಂ ಸಿದ್ದರಾಮಯ್ಯ ವಿರುದ್ಧವೂ ಘೋಷಣೆ ಕೂಗುವ ಮೂಲಕ ಆಕ್ರೋಶ ಹೊರಹಾಕಲಾಯಿತು.ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ನವೀನಕುಮಾರ ಗುಳಗಣ್ಣನವರ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವಾಣಿಶ್ರೀ ಮಠ, ನಗರ ಮಂಡಲದ ಅಧ್ಯಕ್ಷ ಸುನೀಲ್ ಹೆಸರೂರ, ಗ್ರಾಮೀಣ ಮಂಡಲ ಅಧ್ಯಕ್ಷ ಪ್ರದೀಪ್ ಹಿಟ್ನಾಳ, ಮುಖಂಡರಾದ ಮಂಜುಳಾ ಕರಡಿ, ಚಂದ್ರಶೇಖರ ಕವಲೂರ, ಪಕ್ಷದ ವಕ್ತಾರರಾದ ಮಹೇಶ ಅಂಗಡಿ, ಗಣೇಶ ಹೊರಟ್ನಾಳ, ಸೋಮಶೇಖರಗೌಡ ಸೋಂಪುರ, ವಿರುಪಾಕ್ಷಪ್ಪ, ಗೀತಾ ಮುತ್ನಾಳ ಸೇರಿದಂತೆ ಜಿಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.