ಜೆಡಿಎಸ್‌ ಕಾರ್ಯಕರ್ತನ ಮೇಲಿನ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಎದುರಿಸುತ್ತಿರುವ ವಿಧಾನಪರಿಷತ್‌ ಸದಸ್ಯ ಸೂರಜ್ ರೇವಣ್ಣಗೆ ಹಿನ್ನಡೆಯಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿರುವ ‘ಬಿ ರಿಪೋರ್ಟ್‌’ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ತಿರಸ್ಕರಿಸಿದ್ದು, ಡಿ.29ರ ಒಳಗೆ ತನಿಖಾ ವರದಿ ಸಲ್ಲಿಸುವಂತೆ ಸೂಚಿಸಿದೆ. ಇದರಿಂದಾಗಿ ಜಾಮೀನಿನಲ್ಲಿರುವ ಸೂರಜ್‌ಗೆ ಸಂಕಷ್ಟ ಎದುರಾಗಿದೆ.

- ಎಸ್‌ಐಟಿ ಬಿ ರಿಪೋರ್ಟ್‌ ಕೋರ್ಟಲ್ಲಿ ರದ್ದು- ಬೇಲ್‌ ಮೇಲಿದ್ದ ಸೂರಜ್‌ಗೆ ಭಾರಿ ಹಿನ್ನಡೆ

---

ಜೆಡಿಎಸ್ ಕಾರ್ಯಕರ್ತನ ಮೇಲಿನ ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌

ಎಸ್‌ಐಟಿ ಸಲ್ಲಿಸಿದ್ದ ಬಿ ರಿಪೋರ್ಟ್‌ ತಿರಸ್ಕರಿಸಿದ ಜನಪ್ರತಿನಿಧಿ ಕೋರ್ಟ್‌

ತನಿಖೆ ಮುಂದುವರೆಸಿ ಡಿ.29ರೊಳಗೆ ತನಿಖಾ ವರದಿ ಸಲ್ಲಿಸಲು ಸೂಚನೆ

---ಕನ್ನಡಪ್ರಭ ವಾರ್ತೆ ಬೆಂಗಳೂರು

ಜೆಡಿಎಸ್‌ ಕಾರ್ಯಕರ್ತನ ಮೇಲಿನ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಎದುರಿಸುತ್ತಿರುವ ವಿಧಾನಪರಿಷತ್‌ ಸದಸ್ಯ ಸೂರಜ್ ರೇವಣ್ಣಗೆ ಹಿನ್ನಡೆಯಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿರುವ ‘ಬಿ ರಿಪೋರ್ಟ್‌’ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ತಿರಸ್ಕರಿಸಿದ್ದು, ಡಿ.29ರ ಒಳಗೆ ತನಿಖಾ ವರದಿ ಸಲ್ಲಿಸುವಂತೆ ಸೂಚಿಸಿದೆ. ಇದರಿಂದಾಗಿ ಜಾಮೀನಿನಲ್ಲಿರುವ ಸೂರಜ್‌ಗೆ ಸಂಕಷ್ಟ ಎದುರಾಗಿದೆ.

ಮಂಗಳವಾರ ನ್ಯಾಯಾಲಯ ಇದರ ವಿಚಾರಣೆ ನಡೆಸಿತು. ಈ ವೇಳೆ ತನಿಖಾಧಿಕಾರಿಗಳು ಸೂರಜ್‌ ವಿರುದ್ಧದ ಆರೋಪ ಸಾಬೀತುಪಡಿಸಲು ಸಾಕ್ಷ್ಯಾಧಾರಗಳ ಕೊರತೆ ಮುಂದಿಟ್ಟು ನ್ಯಾಯಾಲಯಕ್ಕೆ ಬಿ ರಿಪೋರ್ಟ್‌ ಸಲ್ಲಿಸಿದ್ದರು. ಇದೀಗ ನ್ಯಾಯಾಲಯವು ಬಿ ರಿಪೋರ್ಟ್‌ ತಿರಸ್ಕರಿಸಿದೆ. ಜೊತೆಗೆ ತನಿಖೆ ಮುಂದುವರೆಸಿ ತನಿಖಾ ವರದಿ ಸಲ್ಲಿಸುವಂತೆ ಸೂಚಿಸಿದೆ.

ಏನಿದು ಪ್ರಕರಣ:

ಜೆಡಿಎಸ್‌ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಸೂರಜ್‌ ರೇವಣ್ಣ ವಿರುದ್ಧ 2024ರ ಜೂ.22ರಂದು ಹೊಳೆನರಸೀಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ಸೂರಜ್‌ರನ್ನು ಬಂಧಿಸಿ ಜೈಲಿಗಟ್ಟಲಾಗಿತ್ತು. ಈ ಪ್ರಕರಣವನ್ನು ಸಿಐಡಿ ಎಸ್ಐಟಿ ತನಿಖೆಗೆ ವಹಿಸಲಾಗಿತ್ತು. ಬಳಿಕ ಸೂರಜ್‌ ರೇವಣ್ಣ ಷರತ್ತುಬದ್ಧ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದರು.