ವಿಶ್ವ ಪರಿಸರ ದಿನಾಚರಣೆ-2026 ಹಾಗೂ ‘ಏಕ್ ಪೇಡ್ ಮಾಂ ಕೆ ನಾಮ್’ ಅಭಿಯಾನದ ಅಂಗವಾಗಿ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ಹಾಗೂ ಕರ್ನಾಟಕ ಅರಣ್ಯ ಇಲಾಖೆ ಮಂಗಳೂರು ಇವರ ಸಹಯೋಗದಲ್ಲಿ ಬುಧವಾರ ಎಂಆರ್‌ಪಿಎಲ್ ಆವರಣದಲ್ಲಿ ವೃಕ್ಷಾರೋಪಣಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಮಂಗಳೂರು: ವಿಶ್ವ ಪರಿಸರ ದಿನಾಚರಣೆ-2026 ಹಾಗೂ ‘ಏಕ್ ಪೇಡ್ ಮಾಂ ಕೆ ನಾಮ್’ ಅಭಿಯಾನದ ಅಂಗವಾಗಿ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ಹಾಗೂ ಕರ್ನಾಟಕ ಅರಣ್ಯ ಇಲಾಖೆ ಮಂಗಳೂರು ಇವರ ಸಹಯೋಗದಲ್ಲಿ ಬುಧವಾರ ಎಂಆರ್‌ಪಿಎಲ್ ಆವರಣದಲ್ಲಿ ವೃಕ್ಷಾರೋಪಣಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಗಳೂರು ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಶಿಕಾಂತ್ ಎಸ್.ವಿಭೂತಿ, ಮಂಗಳೂರು ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್, ಉಪ ವಲಯ ಅರಣ್ಯಾಧಿಕಾರಿ ಶ್ರವಣ್ ಕುಮಾರ್ ನಲ್ವಾಡ್, ಬೀಟ್ ಅರಣ್ಯಾಧಿಕಾರಿ ಗಂಗಾಧರ್ ಮುಖ್ಯ ಅತಿಥಿಗಳಾಗಿದ್ದರು.ಎಂಆರ್‌ಪಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ.ಶ್ಯಾಮಪ್ರಸಾದ್ ಕಾಮತ್, ನಿರ್ದೇಶಕ (ರಿಫೈನರಿ) ನಂದಕುಮಾರ್ ವೇಲಾಯುಧನ್ ಪಿಳ್ಳೈ, ನಿರ್ದೇಶಕ (ಹಣಕಾಸು) ಹಾಗೂ ಸಿಎಫ್‌ಒ ದೇವೇಂದ್ರ ಕುಮಾರ್, ಕಾರ್ಯನಿರ್ವಾಹಕ ನಿರ್ದೇಶಕ (ರಿಫೈನರಿ) ಆನಂದ ಕುಮಾರ್, ಕಾರ್ಯನಿರ್ವಾಹಕ ನಿರ್ದೇಶಕ (ಮಾರ್ಕೆಟಿಂಗ್ ಮತ್ತು ವ್ಯವಹಾರ ಅಭಿವೃದ್ಧಿ) ದೀಪಕ್ ಪ್ರಭಾಕರ್, ಕಾರ್ಯನಿರ್ವಾಹಕ ನಿರ್ದೇಶಕ (ಯೋಜನೆಗಳು) ಸುಜಿತ್ ಮತ್ತಿತರರು ಇದ್ದರು.
ಈ ಹಸಿರು ಅಭಿಯಾನವು ಜೀವ ವೈವಿಧ್ಯತೆಯ ಸಂರಕ್ಷಣೆ, ಪರಿಸರ ಜಾಗೃತಿ ವೃದ್ಧಿ ಹಾಗೂ ಪರಿಸರ ಸಮತೋಲನ ಕಾಪಾಡುವ ನಿಟ್ಟಿನಲ್ಲಿ ಎಂಆರ್‌ಪಿಎಲ್ ಕೈಗೊಂಡಿರುವ ನಿರಂತರ ಪ್ರಯತ್ನಗಳಿಗೆ ಸಾಕ್ಷಿಯಾಗಿದೆ. ಭವಿಷ್ಯದ ಪೀಳಿಗೆಗಳಿಗೆ ಹಸಿರು ಮತ್ತು ಸುಸ್ಥಿರ ಪರಿಸರವನ್ನು ನಿರ್ಮಿಸುವ ಉದ್ದೇಶದಿಂದ ಸಂಸ್ಥೆ ಪರಿಸರ ಸ್ನೇಹಿ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ.