ಸಾರಾಂಶ
ಕನ್ನಡಪ್ರಭ ವಾರ್ತೆ ಮಂಡ್ಯ
ಜ.೨೧ರಂದು ಬೆಳಗಾವಿಯಲ್ಲಿ ನಡೆಯುವ ಜೈ ಬಾಪು, ಜೈ ಭೀಮ್, ಜೈ ಸಂವಿಧಾನದ ಐತಿಹಾಸಿಕ ಅಭಿಯಾನವನ್ನು ಯಶಸ್ವಿಗೊಳಿಸಲು ಸಹಕರಿಸುವಂತೆ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್ ಮನವಿ ಮಾಡಿದರು.ಬುಧವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಿಂದ ಕನಿಷ್ಠ ನೂರು ಜನ ನಾಯಕರು ಭಾಗವಹಿಸಬೇಕು ಎಂದು ಕೆಪಿಸಿಸಿ ಸೂಚಿಸಿದೆ. ಆದ್ದರಿಂದ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಭಿಯಾನದಲ್ಲಿ ಪಾಲ್ಗೊಳ್ಳಬೇಕಿದೆ. ಅದಕ್ಕೆ ಈಗಿನಿಂದಲೇ ಎಲ್ಲರೂ ತಯಾರಿ ನಡೆಸುವಂತೆ ತಿಳಿಸಿದರು.
ಮಾಜಿ ಪ್ರಧಾನಮಂತ್ರಿ ಮನಮೋಹನ್‌ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ ಕಳೆದ ವರ್ಷದ ಡಿ.೨೭ರಂದು ನಡೆಯಬೇಕಾಗಿದ್ದ ಎಐಸಿಸಿಯ ಸಮಾವೇಶವನ್ನು ಮುಂದೂಡಲಾಗಿತ್ತು. ಈ ಸಮಾವೇಶವನ್ನು ಜ.೨೧ರಂದು ಬೆಳಗಾವಿಯಲ್ಲೇ ನಡೆಸುತ್ತಿದೆ. ಈ ಸಮಾವೇಶದ ಪೂರ್ವಭಾವಿ ಸಭೆಯನ್ನು ನಡೆಸಲು ಕೆಪಿಸಿಸಿ ಸೂಚಿಸಿದೆ. ಅದರಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರ ಗಮನಕ್ಕೆ ತಂದು ಎಲ್ಲಾ ತಾಲೂಕಿನಲ್ಲೂ ಸಭೆ ಮಾಡಲಾಗುತ್ತಿದೆ ಎಂದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಬಿ.ಸಿ.ಶಿವಾನಂದ, ಶ್ರೀಧರ್, ರುದ್ರಪ್ಪ, ನಾಗರಾಜು, ಉದಯ್‌ಕುಮಾರ್, ವಿಜಯಲಕ್ಷ್ಮೀ, ರಮೇಶ್ ಮಿತ್ರ, ಸಾತನೂರು ಕೃಷ್ಣ, ಲವ, ಗುರು ಆತ್ಮಾನಂದ, ಸಿ.ಡಿ.ವಿಜಯ್‌ಕುಮಾರ್, ವೀಣಾ ಶಂಕರ್, ಕಮಲರಾಜು, ಯಶೋದಾ, ಕಿರಣ್, ಗುರುರಾಜು, ಇತರರಿದ್ದರು.
26ರಂದು ಗಣರಾಜೋತ್ಸವ ಅರ್ಥಪೂರ್ಣವಾಗಿ ಆಚರಿಸಿ: ಎಸ್.ವಿ.ಲೋಕೇಶ್ ಸೂಚನೆಕನ್ನಡಪ್ರಭ ವಾರ್ತೆ ಮಳವಳ್ಳಿ
ಗಣರಾಜೋತ್ಸವವನ್ನು ಜ.26ರಂದು ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ಇಲಾಖೆ ಅಧಿಕಾರಿಗಳು ಸಹಕಾರ ನೀಡಬೇಕೆಂದು ತಹಸೀಲ್ದಾರ್ ಎಸ್.ವಿ.ಲೋಕೇಶ್ ಸೂಚನೆ ನೀಡಿದರು.ಪಟ್ಟಣದ ತಾಲೂಕು ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಷ್ಟ್ರೀಯ ಹಬ್ಬಗಳ ವೇಳೆ ಎಲ್ಲ ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಾಲಂಕಾರ ಮಾಡುವ ನಿಟ್ಟಿನಲ್ಲಿ ಎಲ್ಲರೂ ಚಿಂತನೆ ನಡೆಸಬೇಕಿದೆ ಎಂದರು.
ಗಣರಾಜೋತ್ಸವದಲ್ಲಿ ಸ್ವಚ್ಛತೆ, ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳ ಬಗ್ಗೆ ಜಾಗೃತಿ ವಹಿಸಬೇಕು. ಎಲ್ಲಾ ಇಲಾಖೆಯ ಅಧಿಕಾರಿಗಳು ತಮ್ಮದೇ ಆದ ಜವಾಬ್ದಾರಿಯೊಂದಿಗೆ ಯಶಸ್ವಿಗೊಳಿಸಬಕೆಂದು ತಿಳಿಸಿದರು.ತಾಪಂ ಇಒ ಎಚ್.ಜಿ.ಶ್ರೀನಿವಾಸ್ ಮಾತನಾಡಿ, ಗಣರಾಜೋತ್ಸವದ ಅಂಗವಾಗಿ ಎಲ್ಲಾ ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಬೇಕು, ಪ್ರತಿಯೊಂದು ಇಲಾಖೆಗೆ ಒಂದೊಂದು ಜವಾಬ್ದಾರಿ ನೀಡಲಾಗಿದೆ. ಯಶಸ್ವಿಯಾಗಿ ಪೂರೈಸುವುದರ ಮೂಲಕ ಗಣರಾಜೋತ್ಸವನ್ನು ಅರ್ಥಪೂರ್ಣವಾಗಿಸಲು ಶ್ರಮವಹಿಸಬೇಕೆಂದು ಹೇಳಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗಿಯಾಗಿದ್ದರು.