ಬ್ರಹ್ಮಗಿರಿ ಸಹೋದಯದ ವತಿಯಿಂದ ಎಸ್ಎಂಎಸ್ ಶಾಲೆಯಲ್ಲಿ ಆಯೋಜಿಸಿದ್ದ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಇಲ್ಲಿನ ಅಂಕುರ್ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದಿದ್ದಾರೆ.
ನಾಪೋಕ್ಲು: ಬ್ರಹ್ಮಗಿರಿ ಸಹೋದಯದ ವತಿಯಿಂದ ಎಸ್ಎಂಎಸ್ ಶಾಲೆಯಲ್ಲಿ ಆಯೋಜಿಸಿದ್ದ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಇಲ್ಲಿನ ಅಂಕುರ್ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದಿದ್ದಾರೆ.
ಬ್ರಹ್ಮಗಿರಿ ಸಹೋದಯದ ವತಿಯಿಂದ ಎಸ್ಎಂಎಸ್ ಶಾಲೆಯಲ್ಲಿ ಆಯೋಜಿಸಿದ್ದ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಅಂಕುರ್ ಶಾಲೆ ವಿದ್ಯಾರ್ಥಿಗಳು ಭಾಗವಹಿಸಿ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ಕೊಡಗು ವಿದ್ಯಾಲಯದ ವಿರುದ್ಧ ಅಂತಿಮ ಸ್ಪರ್ಧೆಯಲ್ಲಿ ಬಾಲಕಿಯರು ಪ್ರಥಮ ಸ್ಥಾನ ಹಾಗೂ ಬಾಲಕರು ದ್ವಿತೀಯ ಸ್ಥಾನ ಗಳಿಸಿದ್ದಾರೆ. ಕಿರಿಯ ಮತ್ತು ಹಿರಿಯರ ಆಟೋಟ ಸ್ಪರ್ಧೆಯಲ್ಲಿ ಭಾಗವಹಿಸಿ ಹಲವು ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ.