ಮುದಗೆರೆ ಪಿಎಸಿಎಸ್ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

| Published : Oct 29 2025, 01:15 AM IST

ಸಾರಾಂಶ

ಚನ್ನಪಟ್ಟಣ: ತಾಲೂಕಿನ ಮುದಗೆರೆ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಆಡಳಿತ ಮಂಡಳಿ ಅಧ್ಯಕ್ಷರಾಗಿ ಎಂ.ಚಂದ್ರು ಹಾಗೂ ಉಪಾಧ್ಯಕ್ಷರಾಗಿ ಎಚ್.ಪಿ. ಹೇಮಾವತಿ ಅವಿರೋಧವಾಗಿ ಆಯ್ಕೆಯಾದರು.

ಚನ್ನಪಟ್ಟಣ: ತಾಲೂಕಿನ ಮುದಗೆರೆ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಆಡಳಿತ ಮಂಡಳಿ ಅಧ್ಯಕ್ಷರಾಗಿ ಎಂ.ಚಂದ್ರು ಹಾಗೂ ಉಪಾಧ್ಯಕ್ಷರಾಗಿ ಎಚ್.ಪಿ. ಹೇಮಾವತಿ ಅವಿರೋಧವಾಗಿ ಆಯ್ಕೆಯಾದರು.

ಸಂಘದ ಆಡಳಿತ ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎಂ.ಚಂದ್ರು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಎಚ್.ಪಿ. ಹೇಮಾವತಿ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಇವರು ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಮಂಜುನಾಥ್ ಘೋಷಿಸಿದರು.

ಸಂಘದ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ೭ ನಿರ್ದೇಶಕರು ಹಾಗೂ ಜೆಡಿಎಸ್ ಬೆಂಬಲಿತ ೪ ನಿರ್ದೇಶಕರು ಜಯಗಳಿಸಿದ್ದರು. ನಿರ್ದೇಶಕರಾದ ಸಿ.ಅಂಕೇಗೌಡ, ಜಯಕುಮಾರ್(ಜೆಕೆ), ಎಂ.ಎಚ್.ದೀಪಕ್, ದಿನೇಶ್, ಕರಿಯಪ್ಪ, ಅವರು ನೂತರ ಅಧ್ಯಕ್ಷರು-ಉಪಾಧ್ಯಕ್ಷರ ಅವಿರೋಧ ಆಯ್ಕೆಗೆ ಸಾಥ್ ನೀಡಿದರು.

ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಎಂ.ಚಂದ್ರು ಮಾತನಾಡಿ, ನನ್ನನ್ನು ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲು ಸಹಕರಿಸಿದ ಶಾಸಕ ಯೋಗೇಶ್ವರ್, ಬಮೂಲ್ ನಿರ್ದೇಶಕ ಲಿಂಗೇಶ್‌ಕುಮಾರ್ ಹಾಗೂ ಸಂಘದ ಎಲ್ಲಾ ನಿರ್ದೇಶಕರಿಗೆ ಮತ್ತು ಮುಖಂಡರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಇದೇ ವೇಳೆ ಬಮೂಲ್ ನಿರ್ದೇಶಕ ಎಸ್. ಲಿಂಗೇಶ್‌ಕುಮಾರ್, ಮುದಗೆರೆ ಪಿಎಸಿಎಸ್ ಮಾಜಿ ಅಧ್ಯಕ್ಷ ಎಂ.ಎಚ್. ಜಯರಾಮು, ವಂದಾರಗುಪ್ಪೆ ಪಿಎಸಿಎಸ್ ಅಧ್ಯಕ್ಷ ವಿ.ಬಿ.ಚಂದ್ರು, ತಾಪಂ ಮಾಜಿ ಸದಸ್ಯ ಸುರೇಶ್, ಗ್ರಾಪಂ ಮಾಜಿ ಸದಸ್ಯ ಸಂತೋಷ್, ಅರ್ಕೇಶ್, ಗುಂಡಪ್ಪ, ಬೆಳಕೆರೆ ನಾಗೇಶ್, ಕೋಲೂರು ಇಂದುಕುಮಾರ್, ಪೌಳಿದೊಡ್ಡಿ ರಾಜೇಶ್ ಇತರರು ನೂತನ ಅಧ್ಯಕ್ಷ- ಉಪಾಧ್ಯಕ್ಷರನ್ನು ಅಭಿನಂದಿಸಿದರು.

ಪೊಟೋ೨೮ಸಿಪಿಟಿ೨: ಚನ್ನಪಟ್ಟಣ ತಾಲೂಕಿನ ಮುದಗೆರೆ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷ- ಉಪಾಧ್ಯಕ್ಷರಾಗಿ ಆಯ್ಕೆಯಾದ ಎಂ.ಚಂದ್ರು ಹೇಮಾವತಿ ಅವರನ್ನು ಮುಖಂಡರು ಅಭಿನಂದಿಸಿದರು.