ಮುದನೂರ: ತಹಬದಿಗೆ ಬಂದ ವಾಂತಿಭೇದಿ ಪ್ರಕರಣ

| Published : Jul 22 2024, 01:24 AM IST

ಸಾರಾಂಶ

ಸುರಪುರ ತಾಲೂಕಿನ ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಟಿಎಚ್‌ಒ ಡಾ.ಆರ್.ವಿ. ನಾಯಕ ಭೇಟಿ ನೀಡಿ ರೋಗಿಗಳ ಆರೋಗ್ಯ ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ಸುರಪುರ

ತಾಲೂಕಿನ ಕೆಂಭಾವಿ ಸಮೀಪದ ಮುದನೂರ(ಬಿ) ಗ್ರಾಮದಲ್ಲಿ ಶುಕ್ರವಾರ ಕಾಣಿಸಿಕೊಂಡ ವಾಂತಿ-ಭೇದಿ ಪ್ರಕರಣ ಭಾನುವಾರ ನಿಯಂತ್ರಣಕ್ಕೆ ಬಂದಿದೆ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ. ಆರ್. ವಿ. ನಾಯಕ ತಿಳಿಸಿದರು.

ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ರೋಗಿಗಳ ಆರೋಗ್ಯ ಪರಿಶೀಲಿಸಿ ಮಾತನಾಡಿದ ಅವರು, ಸುಮಾರು 65 ರೋಗಿಗಳಲ್ಲಿ ಭಾನುವಾರ ಸುಮಾರು 43 ಜನರು ಗುಣಮುಖರಾಗಿ ಬಿಡುಗಡೆಗೊಳಿಸಲಾಗಿದೆ.

ಇನ್ನೂ17 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಶನಿವಾರ ರಾತ್ರಿ 11 ಜನ ರೋಗಿಗಳು ಬಂದು ದಾಖಲಾಗಿದ್ದರೆ. ಭಾನುವಾರ ಇಬ್ಬರು ಮಕ್ಕಳು ಸೇರಿದಂತೆ ಒಬ್ಬ ವಯಸ್ಕರನ್ನು ಮುಂದಿನ ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.

ವೈದ್ಯರು ಸೇರಿದಂತೆ ಆರೋಗ್ಯ ಸಿಬ್ಬಂದಿ ಉತ್ತಮವಾಗಿ ಕೆಲಸ ಮಾಡಿ ರೋಗಿಗಳಿಗೆ ಚಿಕಿತ್ಸೆ ನೀಡಿ ಗುಣಪಡಿಸಲು ಶ್ರಮಿಸುತ್ತಿದ್ದಾರೆ. ಸುಮಾರು ಶೇ.70 ರಷ್ಟು ಜನರು ಗುಣಮುಖರಾದ್ದರಿಂದ ಬಿಡುಗಡೆಗೊಳಿಸಲಾಗಿದೆ.

ಉಳಿದವರಿಗೆ ನಿಯಮಿತವಾಗಿ ಪರಿಶೀಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ. ಮುದನೂರ ಗ್ರಾಮದ ಜನರು ಕಾಯಿಸಿ ಆರಿಸಿದ ನೀರನ್ನು ಅಥವಾ ಫಿಲ್ಟರ್‌ ನೀರು ಕುಡಿಯಬೇಕು. ಪೌಷ್ಟಿಕಾಂಶಯುಕ್ತ ಆಹಾರ ಸೇವಿಸಬೇಕು ಎಂದು ಸಲಹೆ ನೀಡಿದರು.

ಈ ವೇಳೆ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಗಿರೀಶ ಕುಲಕರ್ಣಿ, ಡಾ. ಪ್ರಿಯಾಂಕ ಪಾಟೀಲ್, ಡಾ. ಸಿದ್ದು ನ್ಯಾಮಗೊಂಡ ಸೇರಿದಂತೆ ಆರೋಗ್ಯ ಸಿಬ್ಬಂದಿಗಳಿದ್ದರು.