ಉಡುಪಿ ಜಿಲ್ಲಾ ಪ್ರಜಾಸೇವೆ ಇಲಾಖೆ ಮತ್ತು ಕಾಪು ತಾಲೂಕು ಆಡಳಿತ ವತಿಯಿಂದ ಶನಿವಾರ ಇಲ್ಲಿನ ಮುದರಂಗಡಿ ವಿದ್ಯಾನಗರ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ‘ಮುದರಂಗಡಿ ಹೋಬಳಿ ಪ್ರಜಾಸೇವಾ ಆಂದೋಲನ ಸಭೆ’ ಯನ್ನು ನಡೆಸಲಾಯಿತು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಕಾಪು ; ಉಡುಪಿ ಜಿಲ್ಲಾ ಪ್ರಜಾಸೇವೆ ಇಲಾಖೆ ಮತ್ತು ಕಾಪು ತಾಲೂಕು ಆಡಳಿತ ವತಿಯಿಂದ ಶನಿವಾರ ಇಲ್ಲಿನ ಮುದರಂಗಡಿ ವಿದ್ಯಾನಗರ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ‘ಮುದರಂಗಡಿ ಹೋಬಳಿ ಪ್ರಜಾಸೇವಾ ಆಂದೋಲನ ಸಭೆ’ ಯನ್ನು ನಡೆಸಲಾಯಿತು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಈ ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಒಟ್ಟು 44 ಅರ್ಜಿಗಳನ್ನು ಸ್ವೀಕರಿಸಲಾಯಿತು. ಮೂಲಭೂತ ಸೌಕರ್ಯಗಳಾದ ರಸ್ತೆ, ದಾರಿದೀಪ, ಕುಡಿಯುವ ನೀರು ಮತ್ತು ಮೆಸ್ಕಾಂ ಇಲಾಖೆ ಹಾಗೂ ಕಂದಾಯ ಇಲಾಖೆಯಲ್ಲಿ ಅಕ್ರಮ ಸಕ್ರಮ, ನಿವೇಶನ, ಹಕ್ಕುಪತ್ರ, ಸಮಾಜಿಕ ಭದ್ರತಾ ಯೋಜನೆಗಳಲ್ಲಿನ ಸಮಸ್ಯೆ ಬಗ್ಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಪರಿಹಾರೋಪಾಯ ಕಂಡುಕೊಳ್ಳಲು ನಿರ್ಣಯಿಸಲಾಯಿತು.ಈ ಸಂದರ್ಭದಲ್ಲಿ ಕಾಪು ತಹಸೀಲ್ದಾರರಾದ ಅನಂತ ಶಂಕರ್, ಸಹಾಯಕ ಪೋಲಿಸ್ ಅಧೀಕ್ಷಕಿ ಇಷಿತಾ ಗುಪ್ತಾ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಯಲ್ಲಮ್ಮ, ಮುದರಂಗಡಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿಗಳಾದ ಅರುಣ್, ಮುದರಂಗಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀವಿದ್ಯಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.