ಮುಡಾರು ಗ್ರಾಮ ಪಂಚಾಯಿತಿ: ವಿವಿಧ ಸವಲತ್ತು, ಹಕ್ಕುಪತ್ರ ವಿತರಣೆ

| Published : Jan 18 2025, 12:47 AM IST

ಸಾರಾಂಶ

ಮುಡಾರು ಗ್ರಾಮ ಪಂಚಾಯಿತಿಯ ಡಾ.ವಿ.ಎಸ್‌.ಆಚಾರ್ಯ ಸಭಾಭ‍ವನದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ಮತ್ತು ಸರ್ಕಾರರದ ವಿವಿಧ ಸವಲತ್ತು, ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಶಾಸಕ ವಿ.ಸುನಿಲ್ ಕುಮಾರ್‌ ಅಧ್ಯಕ್ಷತೆ ವಹಿಸಿದ್ದರು.

ಕನ್ನಡಪ್ರಭ ವಾರ್ತೆ ಕಾರ್ಕಳ

ಮುಡಾರು ಗ್ರಾಮ ಪಂಚಾಯಿತಿಯ ಡಾ.ವಿ.ಎಸ್‌.ಆಚಾರ್ಯ ಸಭಾಭ‍ವನದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ಮತ್ತು ಸರ್ಕಾರರದ ವಿವಿಧ ಸವಲತ್ತು, ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಶಾಸಕ ವಿ.ಸುನಿಲ್ ಕುಮಾರ್‌ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭ ಮುಡಾರು ಗ್ರಾಮ ಪಂಚಾಯಿತಿಯ ಜನಪರ ಕಾರ್ಯಗಳ ಬಗ್ಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೃತಿ ಡಿ. ಅತಿಕಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಸಕ ವಿ. ಸುನಿಲ್ ಕುಮಾರ್ ವಿವಿಧ ಸವಲತ್ತು ವಿತರಣೆ ಮಾಡಿ ಸಾರ್ವಜನಿಕ ಅಹವಾಲು ಸ್ವೀಕಾರ ಮಾಡಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭ ಕಾರ್ಕಳ ತಹಸೀಲ್ದಾರ್ ಪ್ರದೀಪ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಶಶಿಧರ ಕೆ.ಜಿ., ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಯ ವಿಜಯ, ಮುಡಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ಶೃತಿ ಡಿ. ಅತಿಕಾರಿ, ನಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶೋಕ್ ಪೂಜಾರಿ, ಮಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಮೇಶ್ ಪೂಜಾರಿ, ಈದು ಗ್ರಾಮ ಪಂಚಾಯಿತಿ ಅಧ್ಯಕ್ಷ ಸದಾನಂದ ಪೂಜಾರಿ, ಮಿಯಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸನ್ಮತಿ ನಾಯಕ್ ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.

ಮುಡಾರು ಗ್ರಾಮ ಪಂಚಾಯಿತಿ ಪಿ.ಡಿ.ಒ ರಮೇಶ್ ಎಸ್. ಕಾರ್ಯಕ್ರಮ ನಿರ್ವಹಿಸಿದರು. ಇದೆ ಸಂದರ್ಭದಲ್ಲಿ ಶಾಲೆಗಳಿಗೆ ಸಹಾಯಧನ, ಕ್ರೀಡೋಪಕರಣ ವಿತರಣಾ ಕಾರ್ಯಕ್ರಮ ನೆರವೇರಿತು.