ಸಾರಾಂಶ
ಮುದ್ದಂಡ ಹಾಕಿ ಕಪ್ ಉತ್ಸವದಲ್ಲಿ ಮಹಿಳಾ ತಂಡಗಳ ನಡುವೆ ಹಾಕಿ ಪಂದ್ಯಾವಳಿಯ ಪೈಪೋಟಿ ಆರಂಭಗೊಂಡಿದೆ.
ಕನ್ನಡಪ್ರಭ ವಾರ್ತೆ ಮಡಿಕೇರಿ
ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯ ಬೆಳ್ಳಿಮಹೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ ಮಹಿಳಾ ತಂಡಗಳ ನಡುವೆ ಹಾಕಿ ಪಂದ್ಯಾವಳಿಯ ಪೈಪೋಟಿ ಆರಂಭಗೊಂಡಿದೆ.ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಮಹಿಳೆಯರ 5ಎ ಸೈಡ್ ಹಾಕಿ ಪಂದ್ಯಾವಳಿಗೆ ಅರ್ಜುನ ಪ್ರಶಸ್ತಿ ವಿಜೇತ, ಮಾಜಿ ಒಲಂಪಿಯನ್ ಎಂ.ಎಂ.ಸೋಮಯ್ಯ ಅವರು ಚಾಲನೆ ನೀಡಿದರು.
ಪದ್ಮಶ್ರೀ ಪ್ರಶಸ್ತಿ ವಿಜೇತ ಹಿರಿಯ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಹಾಗೂ ರಾಷ್ಟ್ರೀಯ ಬಾಸ್ಕೆಟ್‌ಬಾಲ್ ಆಟಗಾರ್ತಿ ಮಂಡೇಪಂಡ ಪುಷ್ಪ ಕುಟ್ಟಣ್ಣ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಐಮುಡಿಯಂಡ ರಾಣಿ ಮಾಚಯ್ಯ ಅವರು ಮಾತನಾಡಿ, ಜಿಲ್ಲೆಯಲ್ಲಿ ನಡೆಯುತ್ತಿರುವ ಈ ರೀತಿಯ ಕ್ರೀಡಾಕೂಟಗಳು ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದೆ. ಹಾಕಿ ಒಲಂಪಿಯನ್‌ಗಳನ್ನು ಕೊಡುಗೆಯಾಗಿ ನೀಡಿದ ಹೆಗ್ಗಳಿಕೆ ಕೊಡಗಿಗೆ ಇದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳಾ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಲಿ ಎಂದು ಶುಭಹಾರೈಸಿದರು.
ಮುದ್ದಂಡ ಕಪ್ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ, ಕಾರ್ಯದರ್ಶಿ ಮುದ್ದಂಡ ಆದ್ಯ ಪೂವಣ್ಣ, ಉಪಾಧ್ಯಕ್ಷ ಡೀನ್ ಬೋಪಣ್ಣ, ಮುದ್ದಂಡ ಒಕ್ಕದ ಪ್ರಮುಖರು ಮತ್ತಿತರರು ಉಪಸ್ಥಿತರಿದ್ದರು.