ಪ್ರವಾಸಕ್ಕೆ ತೆರಳಿದ್ದ ಸಜ್ಜಲಗುಡ್ಡ ವಿದ್ಯಾರ್ಥಿಗಳ ಬಸ್ ಪಲ್ಟಿ: ನಾಲ್ವರಿಗೆ ಗಾಯ

| Published : Dec 27 2023, 01:31 AM IST

ಪ್ರವಾಸಕ್ಕೆ ತೆರಳಿದ್ದ ಸಜ್ಜಲಗುಡ್ಡ ವಿದ್ಯಾರ್ಥಿಗಳ ಬಸ್ ಪಲ್ಟಿ: ನಾಲ್ವರಿಗೆ ಗಾಯ
Share this Article
  • FB
  • TW
  • Linkdin
  • Email

ಸಾರಾಂಶ

ಶಿಗ್ಗಾಂವಿ ತಾಲೂಕಿನ ಗೋಟ ಗೋಡಿಯ ರಾಕ್‌ ಗಾರ್ಡ್ಸ್‌ಗೆ ಹೋಗುತ್ತಿದ್ದ ಬಸ್‌, ಹಾವೇರಿಯ ಸವಣೂರು ತಾಲೂಕಿನ ಅಲ್ಲಿಪುರ ಕ್ರಾಸ್‌ ಬಳಿ ಘಟನೆ

ಕನ್ನಡಪ್ರಭ ವಾರ್ತೆ ಮುದಗಲ್

ಪಟ್ಟಣ ಸಮೀಪದ ಸುಕ್ಷೇತ್ರ ಸಜ್ಜಲಗುಡ್ಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದ ಸರ್ಕಾರಿ ಬಸ್ ಪಲ್ಟಿಯಾಗಿದ್ದರಿಂದ ನಾಲ್ವರು ವಿದ್ಯಾರ್ಥಿಗಳಿಗೆ ಗಾಯಗೊಂಡ ಪ್ರಕರಣ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಅಲ್ಲಿಪುರ ಕ್ರಾಸ್ ಬಳಿ ಮಂಗಳವಾರ ಬೆಳಗಿನ ಜಾವ ಜರುಗಿದೆ.

ಸುಕ್ಷೇತ್ರ ಸಜ್ಜಲಗುಡ್ಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರತಿ ವರ್ಷದಂತೆ 6 ಜನ ಶಿಕ್ಷಕರ ನೇತೃತ್ವದಲ್ಲಿ ಪ್ರವಾಸಕ್ಕೆ ತೆರಳಿದ್ದರು. 54 ವಿದ್ಯಾರ್ಥಿಗಳು ಮತ್ತು 6 ಜನ ಶಿಕ್ಷಕರು ಪ್ರವಾಸಕ್ಕೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಶಿಗ್ಗಾಂವಿ ತಾಲೂಕಿನ ಗೋಟ ಗೋಡಿಯ ರಾಕ್‌ ಗಾರ್ಡ್ಸ್‌ಗೆ ಹೋಗುತ್ತಿರುವಾಗ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಯಾವುದೆ ವಿದ್ಯಾರ್ಥಿನಿಯರಿಗೆ ಪ್ರಾಣಾಪಾಯವಾಗದೆ ಇರುವುದು ಶಿಕ್ಷಕ ಸಮೂಹಕ್ಕೆ ಮತ್ತು ಪಾಲಕ ವರ್ಗಕ್ಕೆ ಉಸಿರಾಡುವಂತಾಗಿದೆ. ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಯಗೊಂಡ ವಿದ್ಯಾರ್ಥಿಗಳನ್ನು ಸವಿತಾ ಅಮರೇಗೌಡ, ವಿದ್ಯಾ ಶರಣೇಗೌಡ, ಗುರುಪ್ರಸಾದ್ ಶರಣಬಸವ ಎಂದು ಗುರುತಿಸಲಾಗಿದ್ದು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ಸೂಕ್ತ ಚಿಕಿತಸೆಗೆ ದಾಖಲಿಸಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹುಂಬಣ್ಣ ರಾಠೋಡ ತಿಳಿಸಿದರು.ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಳು ವಿದ್ಯಾರ್ಥಿಗಳನ್ನು ಪಾಲಕರ ಅಪೇಕ್ಷೆಯಂತೆ ಖಾಸಗಿ ಆಸ್ಪತ್ರೆಯಲ್ಲಿ ಮಕ್ಕಳನ್ನು ಚಿಕಿತ್ಸೆಗೆ ಸ್ಥಳಾಂತರಿಸಲಾಗಿದೆ. ಗಾಯಾಳುಗಳ ವಿದ್ಯಾರ್ಥಿಗಳ ವೈದ್ಯಕೀಯ ವೆಚ್ಚವನ್ನು ಕೆಕೆಆರ್‌ಟಿಸಿ ಭರಿಸಲಾಗುತ್ತಿದೆ. ಉಳಿದ ವಿದ್ಯಾರ್ಥಿಗಳನ್ನು ಮರಳಿ ಸಜ್ಜಲಗುಡ್ಡಕ್ಕೆ ಕಳಿಸಲು ಬೇರೆ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹುಂಬಣ್ಣ ರಾಠೋಡ ಹೇಳಿದರು.